Ad Widget .

ಟ್ಯೂಷನ್ ಗೆ ಬರಹೇಳಿ 10ರ ಬಾಲಕಿಯ ಅತ್ಯಾಚಾರಗೈದು ಕೊಲೆ| ಟ್ಯೂಷನ್ ಸೆಂಟರ್ ಶಿಕ್ಷಕನ ಬಂಧನ

ಸಮಗ್ರ ನ್ಯೂಸ್: ಟ್ಯೂಷನ್‌ಗೆ ಬರಲು ಹೇಳಿ 10ರ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್‌ ಗೆ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದ ಮಳವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಎನ್‌ಇಎಸ್ ಬಡಾವಣೆಯ ನಿವಾಸಿ ದಿವ್ಯ(10)ಎಂಬ ಬಾಲಕಿಯನ್ನು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಪಟ್ಟಣ ಪೋಲಿಸರು ಬಂಧಿಸಿದ್ದಾರೆ.

Ad Widget . Ad Widget .

ಆರೋಪಿಯು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ ಕೆಲಸಕ್ಕಿದ್ದ ಆರೋಪಿಯು ನಿನ್ನೆ ಮಂಗಳವಾರ ಬಾಲಕಿ ಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ತಿಳಿಸಿದ್ದ.ಬಾಲಕಿ ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ. ಆತನೇ ಹುಡುಕಾಟ ಮಾಡಿದ್ದ.

Ad Widget . Ad Widget .

ಪಟ್ಟಣದ ಎನ್‌ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬ ದಂಪತಿಯ ಪುತ್ರಿ ಬೆಳಿಗ್ಗೆ 11 ಗಂಟೆಗೆ ಟ್ಯೂಶನ್ ಗೆ ಎಂದು ಮನೆಯಿಂದ ಹೋದವಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಆರೋಪಿ ಕೂಡ ನನಗೆ ಬಾಲಕಿ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿ ಆತನೂ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ.

ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ಯಾರೋ ಒಬ್ಬರು ಬಾಲಕಿ ನೀರಿನ ಸಂಪ್ ನಲ್ಲಿ ಬಿದ್ದಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ದಿವ್ಯಳ ಶವ ಪತ್ತೆಯಾಗಿತ್ತು.

ಆಗಲೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಸ್ಥಳಕ್ಕೆ ಡಿವೈಎಸ್ ಪಿ‌ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು. ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಿ ಆರೋಪಿಯ ಪತ್ತೆಗೆ ಪೋಲಿಸರು ತನಿಖೆಗೆ ಮುಂದಾದರು.
ಮಧ್ಯರಾತ್ರಿ ಆರೋಪಿ ಸಿಕ್ಕ
ಎಸ್‌ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್,ಅಶೋಕ್ ಅವರು ಟ್ಯೂಷನ್ ಸೆಂಟರ್‌ ನೋಡಿಕೊಳ್ಳುತ್ತಿದ್ದ ಆರೋಪಿಯ ಹೇಳಿಕೆಗಳ ಮೇಲೆ ಅನುಮಾನ ಗೊಂಡಿದ್ದರು. ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿ ಯ ಅತ್ಯಾಚಾರ ನಡೆಸಿ ಕೊಲೆ ಮಾಡಿ‌ ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾನೆ.

ಮಳವಳ್ಳಿ ಪಟ್ಟಣ ಠಾಣೆಯ ಪೋಲಿಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಆದರೆ ಇನ್ನೂ ಪ್ರಪಂಚ ನೋಡಬೇಕಿದ್ದ ಅಮಾಯಕ ಬಾಲಕಿ ಯ ಮೇಲೆ ಕಾಮುಕನೊಬ್ಬನ ಕಾಮಕ್ಕೆ ಬಲಿಯಾದದ್ದು ಘೋರ ದುರಂತ.ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಿ ಅತ್ಯಾಚಾರ ಮುಕ್ತ ಸಮಾಜ‌ ನಿರ್ಮಾಣವಾಗಲು ಇನ್ನಷ್ಟು ಕಠಿಣ ಕ್ರಮದ ಕಾನೂನು ಜಾರಿಯಾಗಬೇಕಿದೆ.

Leave a Comment

Your email address will not be published. Required fields are marked *