Ad Widget .

ಮತ್ತಿಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ| ಮುರುಘಾ ಶರಣರ ವಿರುದ್ದ ಮತ್ತೊಂದು ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತಹದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

Ad Widget . Ad Widget .

ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು. ಸದ್ಯ ಜೈಲಿನಲ್ಲಿರುವ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

Ad Widget . Ad Widget .

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದಿದ್ದರು.

Leave a Comment

Your email address will not be published. Required fields are marked *