Ad Widget .

ರಾಜ್ಯದಲ್ಲಿ ವರುಣಾರ್ಭಟಕ್ಕೆ 13 ಮಂದಿ ಬಲಿ| ಅಪಾರ ಹಾನಿ, ಆಸ್ತಿಪಾಸ್ತಿ ನಷ್ಟ| ಅ 15ರ ವರೆಗೆ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್ : ಈ ವರ್ಷ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಈ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದ 13 ಜನರು ಸಾವನ್ನಪ್ಪಿದ್ದಾರೆ.

Ad Widget . Ad Widget .

ಭಾರೀ ಮಳೆಯಿಂದ ಜಾನುವಾರುಗಳು ಮತ್ತು ಆಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಜಿಲ್ಲಾಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

Ad Widget . Ad Widget .

ಅಕ್ಟೋಬರ್ 1ರಿಂದ ಮಳೆಯಿಂದಾಗಿ ಕರ್ನಾಟಕದಲ್ಲಿ 28 ಜಾನುವಾರುಗಳು ಸಾವನ್ನಪ್ಪಿವೆ, 3,309 ಮನೆಗಳಿಗೆ ಹಾನಿಯಾಗಿದೆ, ಸುಮಾರು 6,279 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಐದು ಪರಿಹಾರ ಶಿಬಿರಗಳನ್ನು ತೆರೆದಿದ್ದು, 1,330 ಸಂತ್ರಸ್ತ ಜನರು ಆಶ್ರಯ ಪಡೆಯುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ಸಂಭವಿಸಿದ ಮಳೆ ಹಾನಿಗೆ ಪರಿಹಾರವನ್ನು ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ವಿತರಿಸಬೇಕು ಎಂದು ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಎಲ್ಲೋ’ ಅಲರ್ಟ್ ಘೋಷಿಸಲಾಗಿದೆ.

Leave a Comment

Your email address will not be published. Required fields are marked *