Ad Widget .

”ಜಿಹಾದಿಗಳ ಬೆದರಿಕೆಗೆ ಪಲಾಯನ ಮಾಡುವವ ನಾನಲ್ಲ” | ಕೊಲೆ ಬೆದರಿಕೆ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಹಲ್ಲೆ ಪ್ರಕರಣ ಘಟನೆಯ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹರೀಶ್ ಪೂಂಜಾ ರಾತ್ರಿ ಬೆಂಗಳೂರಿನಿಂದ ಬಂದು ಬೆಳ್ತಂಗಡಿ ಹೋಗುತ್ತಿರುವಾಗ ಸುಮಾರು 11 ಗಂಟೆ ವೇಳೆ ದಾಳಿ ನಡೆದಿದೆ.

Ad Widget . Ad Widget .

ಈ ಸಂದರ್ಭದಲ್ಲಿ ನಾನು ನನ್ನ ಸ್ನೇಹಿತನ ಕಾರಿನಲ್ಲಿದ್ದೆ, ದಾಳಿ ನಡೆಸಲು ಬಂದಿದ್ದ ಕಾರು ಚಾಲಕ ಮೊದಲು ನನ್ನ ಇನ್ನೋವಾ ಕಾರಿಗೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆ ಕಾರಿನಲ್ಲಿ ನಾನು ಇಲ್ಲದ ಕಾರಣ ಮತ್ತೆ ನಾನಿದ್ದ ಹುಂಡೈ I 20 ಕಾರಿನ ಮೇಲೆ ಹಲ್ಲೆ ನಡೆಸಿದ್ದಾನೆ.

ಕಾರಿನ ಗಾಜಿನ ಮೇಲೆ ಹ್ಯಾಂಡಲ್ ಇರುವ ತಲುವಾರು ಮೂಲಕ ಹೊಡೆದಿದ್ದಾನೆ. ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ಡಿವೈಎಸ್ಪಿ ಗಮನಕ್ಕೆ ತಂದಿದ್ದೇನೆ, ಗೃಹ ಸಚಿವರೂ ನನ್ನ ಬಳಿ ಈ ವಿಚಾರವಾಗಿ ಚರ್ಚಿಸಿದ್ದಾರೆ. ಭದ್ರತೆಗೆ ವ್ಯವಸ್ಥೆ ಮಾಡುವ ಭರವಸೆಯನ್ನೂ ನೀಡಿದ್ದಾರೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಹಿಂದುತ್ವದ ವಿಚಾರದಲ್ಲಿ ರಾಜಿಯಿಲ್ಲ ಎಂದಿದ್ದಾರೆ.

ಕೇರಳ ನೊಂದಣಿಯ ಕಾರು ಚಾಲಕ ಈ ಕೃತ್ಯವೆಸಗಿದ್ದು, ಈಗಾಗಲೇ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಕಾರಿನ ನಂಬರ್ ನೀಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

Leave a Comment

Your email address will not be published. Required fields are marked *