Ad Widget .

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಳಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

Ad Widget . Ad Widget .

ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ

Ad Widget . Ad Widget .

ಮೊನ್ನೆ ರಾತ್ರಿ ಮಂಗಳೂರಿನ ಫರಂಗಿಪೇಟೆ ಬಳಿಕ ಶಾಸಕರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಝಳಪಿಸಿ, ಕಾರಿನ ಗಾಜುಗಳನ್ನು ಜಖಂ ಮಾಡಿದ್ದಾರೆ. ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಶಾಸಕ ಹರೀಶ್ ಪೂಂಜಾರ ಕಾರ್ ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು.

ಆ ಬಳಿಕ ಪೊಲೀಸರು ತನಿಖೆ ಆರಂಭಿಸಿ ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಂತರ ಪ್ರಕರಣದ ಬಗ್ಗೆ ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಹರೀಶ್ ಪೂಂಜಾ, ಇದರ ಹಿಂದೆ ಜಿಹಾದಿ ಶಕ್ತಿಗಳಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ. ಇದಕ್ಕೆ ನನ್ನ ಮೇಲೆ ಜಿಹಾದಿ ಶಕ್ತಿಗಳು ಹಗೆ ಸಾಧಿಸುವ ಸಾಧ್ಯತೆ ಇದೆ. ಆದ್ರೆ ಇದಕ್ಕೆ ನಾವು ಹೆದರಲ್ಲ. ಹಿಂದುತ್ವದ ವಿಚಾರದಲ್ಲಿ ರಾಜಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Comment

Your email address will not be published. Required fields are marked *