Ad Widget .

ಸಿದ್ದಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ.

Ad Widget . Ad Widget .

ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು.

Ad Widget . Ad Widget .

ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ ಮುಂದೆ ಕುಟುಂಬಸ್ಥರು ಕುಳಿತು ಆಕ್ರಂದಿಸುತ್ತಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *