ಮಂಗಳೂರಿನ ಮಳಲಿಯಲ್ಲಿರುವುದು ಮಸೀದಿಯೋ? ಮಂದಿರವೋ? ನ.9 ರಂದು ಹೊರಬೀಳಲಿದೆ ತೀರ್ಪು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಮಳಲಿಯಲ್ಲಿರುವ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಪ್ರಕಟಿಸಲಿದೆ.

Ad Widget ... ..

ಮಳಲಿಯ ಅಸಯ್ಯಿದ್ ಅದ್ಬುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಏಪ್ರಿಲ್ 21 ರಂದು ದರ್ಗಾವನ್ನು ನವೀಕರಣಗೊಳಿಸಲು ದರ್ಗಾದ ಎದುರಿನ ಭಾಗವನ್ನು ನೆಲ ಸಮಗೊಳಿಸಲಾಗಿತ್ತು.

Ad Widget

ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಾಲಯದ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿದ್ದವು. ಇದರಿಂದ ಇದು ಹಿಂದೂ ದೇವಸ್ಥಾನ ಆಗಿರುವ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದವು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತು ತೀರ್ಪು ಬರಬೇಕಾದ ಹಿನ್ನೆಲೆಯಲ್ಲಿ ಆದೇಶವನ್ನು ನವೆಂಬರ್ 9 ಕ್ಕೆ ಮುಂದೂಡಿದೆ.

Leave a Comment

Your email address will not be published. Required fields are marked *