Ad Widget .

ಅಡಿಕೆ ಎಲೆಚುಕ್ಕೆ ರೋಗ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ನಿರ್ದೇಶನ ನೀಡಿದ ಕೇಂದ್ರ ಸಚಿವ ತೋಮರ್

ಸಮಗ್ರ ನ್ಯೂಸ್: ಕರ್ನಾಟಕದ ಮಲೆನಾಡು ಹಾಗೂ ಇತರ ಭಾಗಗಳಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿಯೊಂದನ್ನು ಕೇಂದ್ರದ ಕೃಷಿ, ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮಾರ್ ರಚಿಸಲು ನಿರ್ದೇಶನ ನೀಡಿದ್ದಾರೆ.

Ad Widget . Ad Widget .

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಹೊಸದಿಲ್ಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮಾಡಿದ ಮನವಿಯ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

Ad Widget . Ad Widget .

ತಜ್ಞರ ಸಮಿತಿಯು ಎಲೆಚುಕ್ಕೆ ರೋಗದ ಅಧ್ಯಯನ ನಡೆಸಿ ಸಮಸ್ಯೆ ಪರಿಹಾರಕ್ಕೆ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಹಾಗೂ ರೋಗದ ತಡೆಗೆ ಕಾರ್ಯತಂತ್ರಗಳನ್ನು ಅಭಿವೃದ್ಧಿ ಪಡಿಸಲಿದೆ. ಸಮಸ್ಯೆಯ ಶೀಘ್ರ ಪರಿಹಾ ರಕ್ಕೆ ತೆಗೆದುಕೊಂಡ ತ್ವರಿತ ಪ್ರತಿಕ್ರಿಯೆಗಾಗಿ ಮಲೆನಾಡಿನ ರೈತರ ಪರವಾಗಿ ಕೇಂದ್ರ ಸಚಿವರಿಗೆ ಕೃತಜ್ಞತೆ ಗಳನ್ನು ಸಲ್ಲಿಸುವುದಾಗಿ ಸಂಸದರ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *