Ad Widget .

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸರು ಮಂಗಳವಾರ ಮಠಾಧೀಶರ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಿದ್ದಾರೆ.

Ad Widget . Ad Widget .

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಮಠಾಧೀಶರು, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget . Ad Widget .

ಮಠವು ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ ಐದು ವರ್ಷದ ಬಾಲಕಿ ಮತ್ತು 17 ವರ್ಷದ ಬಾಲಕಿಯ ವಿವರಗಳನ್ನು ಮಠವು ಉದ್ದೇಶಪೂರ್ವಕವಾಗಿ ಮರೆಮಾಚಿದೆ ಮತ್ತು ಈ ಮೂಲಕ ಬಾಲನ್ಯಾಯ ಕಾಯ್ದೆಯ ಸೆಕ್ಷನ್ 32 ಅನ್ನು ಉಲ್ಲಂಘಿಸಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ದೂರಿನಲ್ಲಿ ಆರೋಪಿಸಿದೆ.

Leave a Comment

Your email address will not be published. Required fields are marked *