Ad Widget .

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ.

Ad Widget . Ad Widget .

ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ.

Ad Widget . Ad Widget .

ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂಥಪುರ ಸಂಸದ ಶಶಿ ತರೂರ್ ಅವರು ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಚುನಾವಣೆಗೆ ಮುಂಚೆಯೇ ಮಲ್ಲಿಕಾರ್ಜುನ ಖರ್ಗೆ ಗೆಲ್ಲಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿತ್ತು. ಇತ್ತೀಚಿನ ಕೆಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ.

Leave a Comment

Your email address will not be published. Required fields are marked *