ಸಮಗ್ರ ನ್ಯೂಸ್: ವಾಹನಗಳಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವುದು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದೆ. ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಾರು ತಯಾರಕರಿಗೆ ಹಿಂಭಾಗದ ಸೀಟ್ ಬೆಲ್ಟ್ಗಳಿಗೆ ಅಲಾರಂ ವ್ಯವಸ್ಥೆಯನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಲು ಕರಡು ನಿಯಮಗಳನ್ನು ಹೊರಡಿಸಿದ್ದರು. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಇತ್ತೀಚೆಗೆ ಕಾರು ಅಪಘಾತದಲ್ಲಿ ನಿಧನರಾದ ನಂತರ ಕೇಂದ್ರವು ಹಿಂಭಾಗದ ಸೀಟ್ ಬೆಲ್ಟ್ ಗಳ ಬಳಕೆಯನ್ನು ಜಾರಿಗೆ ತರಲು ಯೋಚಿಸುತ್ತಿದೆ. ಅವರು ಹಿಂದಿನ ಸೀಟಿನಲ್ಲಿ ಕುಳಿತಿದ್ದರು ಮತ್ತು ಅವರ ಸೀಟ್ ಬೆಲ್ಟ್ ಇರಲಿಲ್ಲ ಎಂದು ಮಾಧ್ಯಮ ವರದಿಗಳು ತಿಳಿಸಿದ್ದವು.