ಸಮಗ್ರ ನ್ಯೂಸ್: ಬ್ರಿಟನ್’ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸುವ ಮೂಲಕ ಟ್ರಸ್ ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಇನ್ನು ಮುಂದಿನ ವಾರದೊಳಗೆ ನಾಯಕತ್ವದ ಚುನಾವಣೆ ಪೂರ್ಣಗೊಳ್ಳಲಿದೆ.
‘ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನೀಡಿದ ಜನಾದೇಶವನ್ನು ನಾನು ಪೂರೈಸಲು ಸಾಧ್ಯವಿಲ್ಲ ಎಂದು ನಾನು ಅರಿತುಕೊಂಡೆ. ನಾನು ಮಹಾರಾಜರೊಂದಿಗೆ ಮಾತನಾಡಿದೆ ಮತ್ತು ನನ್ನ ನಿರ್ಧಾರದ ಬಗ್ಗೆ ಅವರಿಗೆ ತಿಳಿಸಿದೆ. ಉತ್ತರಾಧಿಕಾರಿಯನ್ನ ಆಯ್ಕೆ ಮಾಡುವವರೆಗೂ ನಾನು ಪ್ರಧಾನಿಯಾಗಿಯೇ ಇರುತ್ತೇನೆ’ ಎಂದು ಟ್ರಸ್ ಸುದ್ದಿಗಾರರಿಗೆ ತಿಳಿಸಿದರು.