Ad Widget .

ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ.

Ad Widget . Ad Widget .

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು.

Ad Widget . Ad Widget .

ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಆಚರಣೆಗಳ ಬಗ್ಗೆ ಯಾರೂ ಮಾತನಾಡಬಾರದು ಎಂದು ಹೇಳಿದ್ದಾರೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ, ಕಾಂತಾರ ಸಿನಿಮಾ ವಿವಾದದ ಭುಗಿಲೆದ್ದ ಬೆನ್ನಲ್ಲೇ ಈ ತೀರ್ಮಾನ ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *