Ad Widget .

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನ.1ರಂದುಕನ್ನಡ ರಾಜ್ಯೋತ್ಸವದ ದಿನ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ʼಕರ್ನಾಟಕ ರತ್ನ ಪ್ರಶಸ್ತಿ ʼ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Ad Widget . Ad Widget .

ಈ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ.
ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ ಬೊಮ್ಮಾಯಿ ಹೇಳಿದ್ದರು.

Ad Widget . Ad Widget .

ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಅಂತ ತಿಳಿಸಿದರು. ಅಂದ ಹಾಗೇ ಈ ಬಾರಿ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದರು.

ಅಕ್ಟೋಬರ್ 29, 2021 ರಂದು ಬೆಳಗ್ಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಅಭಿಮಾನಿಗಳ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು.

Leave a Comment

Your email address will not be published. Required fields are marked *