Ad Widget .

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ. 20ರಿಂದ ನ. 30ರ ವರೆಗೆ ಜಿಲ್ಲೆಯೊಳಗೆ ಮತ್ತು ಹೊರಜಿಲ್ಲೆ ಅಥವಾ ನೆರೆರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

Ad Widget . Ad Widget .

ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್‌ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಈ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್‌ ಮಾಡುವಂತೆ ಸಂಬಂಧಿಸಿದವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *