ಸಮಗ್ರ ನ್ಯೂಸ್: ಶಾಲೆಯೊಂದರಲ್ಲಿ ಏರ್ಪಡಿಸಿದ್ದ ‘ಶಾಲಾ ಕಲೋತ್ಸವ ‘ ಕಾರ್ಯಕ್ರಮದ ವೇಳೆ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯಿಂದ ವರದಿಯಾಗಿದೆ.
ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಮೂರು ದಿನಗಳ ಕಲೋತ್ಸವ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 1.30 ರ ಸುಮಾರಿಗೆ ಈ ದುರಂತ ನಡೆದಿದೆ. ಈ ಸಂದರ್ಭ ಸುಮಾರು 200ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಚಪ್ಪರದಡಿಯಲ್ಲಿ ಸಿಲುಕಿದ್ದರು ಎನ್ನಲಾಗಿದೆ. 40 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂಬ ಮಾಹಿತಿಯಿದೆ.
9ಶಾಲಾ ಮಕ್ಕಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಾಗೂ ಉಳಿದ ಶಿಕ್ಷಕರನ್ನು ಮಂಗಳೂರಿನ ಉಳಿದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲೋತ್ಸವದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಆಗಮಿಸಿದ್ದ ಶಿಕ್ಷಕರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಕೇರಳ ಶಿಕ್ಷಣ ಸಚಿವರಾದ ವಿ. ಶಿವನ್‌ಕುಟ್ಟಿ ತನಿಖೆ ನಡೆಸಿ ವರದಿ ನೀಡಲು ಸ್ಥಳೀಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿದೆ ಆದೇಶ ನೀಡಿದ್ದಾರೆ.