ಸಮಗ್ರ ನ್ಯೂಸ್: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ.

ಮೈಸೂರಿನ ಮಹಾರಾಣಿ ಪದವಿ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕಾಲೇಜಿನ ಮುಂಭಾಗದ ಎರಡು ಲ್ಯಾಬ್ ಧರಾಶಾಯಿ. ವಿದ್ಯಾರ್ಥಿಗಳು ಇಲ್ಲದ ಕಾರಣ ಭಾರೀ ದುರಂತ ತಪ್ಪಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ. ಕಾಲೇಜಿನ ಇತರೆ ಕಟ್ಟಡ ಕೂಡ ಇದೇ ಪರಿಸ್ಥಿತಿ ಇದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ