ಸಮಗ್ರ ನ್ಯೂಸ್: ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಹೊರ ಬಂದಿದ್ದ ನಟಿ, ರಾಜಕಾರಣಿ ರಮ್ಯಾ ಅವರು ಶನಿವಾರ ರಾಯಚೂರಿನಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಜತೆ ಹೆಜ್ಜೆ ಹಾಕಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಮ್ಯಾ ಅವರು 2013ರ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ 2014ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
ಕೆಲವು ದಿನಗಳ ಬಳಿಕ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸ್ಥಾನ ಬಿಟ್ಟ ನಂತರ ಐದಾರು ವರ್ಷಗಳಿಂದ ಪಕ್ಷದಿಂದಲೇ ದೂರವಾಗಿದ್ದರು. ನಂತರ ಸ್ವಲ್ಪ ದಿನಗಳ ಬಳಿಕ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿದ್ದರು. ನಂತರ ಅಲ್ಲಿಂದ ಇಲ್ಲಿಯವರೆಗೂ ಫೇಸ್‌ಬುಕ್‌ನಲ್ಲಿ ಸಕ್ರಿಯರಾಗಿದ್ದರು.
ಆದರೆ ಇದುವರೆಗೂ ರಮ್ಯಾ ಅವರು ಕಾಂಗ್ರೆಸ್ ಸಂಪರ್ಕಕ್ಕೆ ಬಂದಿರಲಿಲ್ಲ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೇ ಬಿಜೆಪಿ ಸರ್ಕಾರದ ಕೆಲವು ನಿರ್ಧಾರಗಳನ್ನು ಖಂಡಿಸುತ್ತಾ ಬಂದಿದ್ದು, ಕೆಲವು ದಿನಗಳು ಮೌನವಾಗಿದ್ದರು. ಈಗ ಭಾರತ ಐಕ್ಯತಾ ಪಾದಯಾತ್ರೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.