ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ.

Ad Widget ... ..

‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ.

Ad Widget

ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ.

ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ ಸಿಬ್ಬಂದಿಯ ಮಾಹಿತಿ ಪಡೆದಿದ್ದು, ಅದರ ಆಧಾರದಲ್ಲಿ 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸಲು ನಿರ್ಣಯ ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *