ಸಮಗ್ರ ನ್ಯೂಸ್: ಹಾಲು ಉತ್ಪಾದಕರಿಗೆ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ.
ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅ.11 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ 2.05 ರೂ. ಹೆಚ್ಚಳ ಮಾಡಿದೆ.
ಇನ್ನು ಕೆಎಂಎಫ್ ಸಹ ಪ್ರತಿ ಲೀಟರ್ ಹಾಲಿಗೆ 3 ರೂ. ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ. ಈ ಬೇಡಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಕೆಎಂಎಫ್ ಅಡಿಯ ಎಲ್ಲ ಒಕ್ಕೂಟಗಳಿಗೂ ಅನ್ವಯವಾಗಲಿದೆ.