ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Ad Widget ... ..

ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ ಮೇಲೆ ಬೈಕ್ ಹತ್ತಿಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಈ ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಸೇರಿದಂತೆ ಹಲವರು ಖಂಡನೆ ವ್ಯಕ್ತಪಡಿಸಿ, ಕಿಡಿಕೇಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಯುವಕರು ನೀಡಿದ ದೂರಿನ ಆಧಾರದ ಮೇಲೆ 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಹಲ್ಲೆಗೊಳಗಾದವರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ದ.ಕ. ಎಸ್ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *