Ad Widget .

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಸಮಗ್ರ ನ್ಯೂಸ್: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

Ad Widget . Ad Widget .

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.

Ad Widget . Ad Widget .

ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ ಸಮುದಾಯಕ್ಕೆ ಸೇರಿದ ಇವರು ಸವದತ್ತಿಯ ಗೌರವ ಕುಟುಂಬಕ್ಕೆ ಸೇರಿದವರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Comment

Your email address will not be published. Required fields are marked *