ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್ ನಾಯಕರು ಪ್ರಕರಣವನ್ನು ತಿರುಚಿ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ದಲಿತ ವಿರೋಧಿ ನೀತಿ ಇದರಿಂದ ಬಹಿರಂಗವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ನಡುವೆ ಸಚಿವರು ಸಂತ್ರಸ್ತ ದಲಿತ ಮಹಿಳೆಯ ಮನೆಗೆ ಭೇಟಿ ನೀಡಿ ನೊಂದ ಮಹಿಳೆಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ. ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.