Ad Widget .

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ

ಸಮಗ್ರ ನ್ಯೂಸ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು.

Ad Widget . Ad Widget .

ಪಾಕಿಸ್ತಾನ ನೀಡಿದ 160ರನ್​ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಉಪ ನಾಯಕ ಕೆ.ಎಲ್ ರಾಹುಲ್ ಹಾಗೂ ನಾಯಕ ರೋಹಿತ್​ ಶರ್ಮ 4 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.

Ad Widget . Ad Widget .

ಈ ವೇಳೆ ವಿರಾಟ್ ಕೊಹ್ಲಿ ಜೊತೆಯಾದ ಸೂರ್ಯ ಕುಮಾರ್ ಯಾದವ್ 15 ರನ್ ನೀಡಿ ನಿರ್ಗಮಿಸಿದರು.ಅಕ್ಷರ್ ಪಟೇಲ್ 2 ರನ್ ಗಳಿಸಿ ರನೌಟ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು.

ನಿಧಾನವಾಗಿ ಆಟ ಆರಂಭಿಸಿದ ವಿರಾಟ್ ಕೊಹ್ಲಿ ಕ್ರಿಸ್ ಕಚ್ಚಿ ನಿಂತು ಬ್ಯಾಟ್ ಬೀಸಿದರು. ಹಾರ್ದಿಕ್ ಪಾಂಡ್ಯಾ ವಿರಾಟ್ ಕೊಹ್ಲಿ ಸಾಥ್ ನೀಡಿದರು. ಕೊನೆಯಲ್ಲಿ ಎಡವಿದ ಪಾಂಡ್ಯಾ 40ರನ್ ಗಳಿಸಿ ಔಟ್​ ಆದರು. ಭಾರತಕ್ಕೆ ಗೆಲುವು ಕಠಿಣವಾಗಿದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟ್ ಬೀಸಿದರು. ಅಜೇಯ 82 ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.

Leave a Comment

Your email address will not be published. Required fields are marked *