Ad Widget .

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಠದಲ್ಲಿಯೇ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಜಮೀನು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget . Ad Widget .

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.

ಸ್ವಾಮೀಜಿ ನಿಧನ ಹಿನ್ನೆಲೆ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇನ್ನು ಡೆತ್ ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೋಲಿಸರ ತನಿಖೆ ನಂತರ ಸತ್ಯ ಬಯಲಾಗಲಿದೆ.

Leave a Comment

Your email address will not be published. Required fields are marked *