ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.24 ರಂದು ಮಂಚಿಯಲ್ಲಿ ನಡೆದಿದೆ.

Ad Widget ... ..

ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ಇವರು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು. ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ಮಾಡಿದ್ದಳು. ರಾತ್ರಿ ವೇಳೆ ತಲೆ ನೋವು ಜಾಸ್ತಿ ಯಾಗಿ ವಾಂತಿ ಮಾಡುತ್ತಿದ್ದ ಭವ್ಯಾಳನ್ನು ಮುಂಜಾನೆ ಸುಮಾರು 4 ಗಂಟೆ ಯ ವೇಳೆಗೆ ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷೆ ಮಾಡಿ ಹೆಚ್ಚಿನ ಚಿಕಿತ್ಸೆ ಗಾಗಿ‌ ಮಂಗಳೂರು ‌ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.

Ad Widget

ಆದರೆ ವೆನ್ಲಾಕ್ ಗೆ ಅಂಬ್ಯುಲೆನ್ಸ್ ನಲ್ಲಿ ಸಾಗಿಸಲಾಯಿತಾದರೂ ದಾರಿ ಮಧ್ಯೆ ಭವ್ಯಾ ಅವಳು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ತಿಳಿಸಿದ್ದಾರೆ. ವೈದ್ಯರ ಪೋಸ್ಟ್ ಮಾರ್ಟ್ಂ ರಿಪೋರ್ಟ್ ಬಳಿಕ ಸಾವಿನ ಕಾರಣ ಗೊತ್ತಾಗಬಹುದು. ಬಂಟ್ವಾಳ ಗ್ರಾಮಾಂತರ ಎಸ್.ಐ ಹರೀಶ್ ವೆನ್ಲಾಕ್ ಆಸ್ಪತ್ರೆಗೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *