Ad Widget .

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

Ad Widget . Ad Widget .

24 ವರ್ಷಗಳ ನಂತರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ.

Ad Widget . Ad Widget .

ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು. ನಂತ್ರ, ಇಂದು ಬೆಳಗ್ಗೆ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

Leave a Comment

Your email address will not be published. Required fields are marked *