Ad Widget .

ರಾಜ್ಯದಲ್ಲಿ ಕುಸಿದ ತಾಪಮಾನ| ಮೈಕೊರೆಯುವ ಚಳಿಗೆ ಜನತೆ ತತ್ತರ

ಸಮಗ್ರ ನ್ಯೂಸ್ : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಟ ತಾಪಮಾನ ದಾಖಲಾಗಿದೆ.

Ad Widget . Ad Widget . Ad Widget .

ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೀದರ್‌, ವಿಜಯಪುರ, ಕಲಬುರಗಿ, ಮಂಡ್ಯ ಮತ್ತು ಕೊಡಗು ಜಿಲ್ಲೆಯ ಹಲವೆಡೆ ಕನಿಷ್ಠ ತಾಪಮಾನ 10.9 ಡಿಗ್ರಿ ಸೆಲ್ಸಿಯಸ್‌ನಿಂದ 13 ಡಿಗ್ರಿ ಸೆಲ್ಸಿಯಸ್‌ ತನಕ ಕುಸಿದಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ ವಾಡಿಕೆಗಿಂತ 7 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, 13 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಭಾರತೀಯ ಹವಾಮಾನ ಕೇಂದ್ರದ ನಿರ್ದೇಶಕಿ ಡಾ.ಗೀತಾ ಅಗ್ನಿಹೋತ್ರಿ, ಉತ್ತರದಿಂದ ಬೀಸುತ್ತಿರುವ ಗಾಳಿ ಮತ್ತು ಮೋಡ ಇಲ್ಲದಿರುವುದರಿಂದ ವಾತಾವರಣದ ಉಷ್ಣತೆ ಕುಸಿದಿದೆ. ವಾತಾವರಣದಲ್ಲಿನ ತೇವಾಂಶ ಕೂಡ ಕಡಿಮೆ ಆಗಿದೆ. ಚಳಿಗಾಲದ ಸ್ಥಿತಿ ಸೃಷ್ಟಿಯಾಗಿದೆ. ಪೂರ್ವದಿಂದ ಗಾಳಿ ಬೀಸುವ ತನಕ ಇದೇ ಸ್ಥಿತಿ ಇರಲಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಎರಡ್ಮೂರು ದಿನದಲ್ಲಿ ಪೂರ್ವ ಕರಾವಳಿ ಕಡೆಯಿಂದ ಬೀಸುವ ಗಾಳಿ ಹೆಚ್ಚಾಗಲಿದೆ. ಅದ್ದರಿಂದ ಮೂರ್ನಾಲ್ಕು ದಿನದಲ್ಲಿ ಮತ್ತೆ ಉಷ್ಣಾಂಶದಲ್ಲಿ ಏರಿಕೆ ಕಾಣಬಹುದು, ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *