ಸಮಗ್ರ ನ್ಯೂಸ್ : ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರಿ ಗ್ರಾಮದಲ್ಲಿ ನಡೆದಿದೆ.
ಘಟನೆಯಿಂದ ಗ್ರಾಮಸ್ಥರು ಸರಿಯಾದ ಚಿಕಿತ್ಸೆ ಸಿಗದೆ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಗ್ರಾಮಕ್ಕೆ ರಾಯದುರ್ಗ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಂಕರ್ ತೆಗ್ಗಿ, ಸಮಗ್ರ ನ್ಯೂಸ್: ವಿಜಯಪುರ