‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್: ವಿಶ್ವದೆಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿದ್ದು, ಸದ್ಯ ಕೇರಳದ ನ್ಯಾಯಾಲಯವೊಂದು ಹಾಡು ಬಳಸದಂತೆ ತಡೆಯಾಜ್ಞೆ ನೀಡಿದೆ.

Ad Widget ... ..

‘ವರಾಹರೂಪಂ’ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ಸಂಬಂಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು. ಈ ಕೇಸ್ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದೆ.

Ad Widget

ಕಾಂತಾರಾ ಸಿನಿಮಾದ ವರಾಹ ರೂಪಂ ಎನ್ನುವ ಫೇಮಸ್​ ಟ್ಯೂನ್​ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಅಂತ ಚರ್ಚೆ ಶುರುವಾಗಿತ್ತು. ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿತ್ತು . ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಈ ಹಾಡನ್ನು ಒಳಗೊಂಡಿದ್ದ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಕೇಸ್​ ಹಾಕಲು ನಿರ್ಧರಿಸಿದ್ದರು.

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್​ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಈಗ ಕೇಸ್​ ಹಾಕಲು ನಿರ್ಧರಿಸಿದ್ದರು.

ಇನ್ನು ಕಾಂತಾರ ತಂಡದ ವಿರುದ್ಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡ ಬೇಸರ ವ್ಯಕ್ತಪಡಿಸಿತ್ತು. ‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್​’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್​ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಸೋಶಿಯಲ್​ ಮೀಡಿಯಾದಲ್ಲಿ ತಿಳಿಸಿತ್ತು.

Leave a Comment

Your email address will not be published. Required fields are marked *