Ad Widget .

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ.

Ad Widget . Ad Widget .

ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ.

Ad Widget . Ad Widget .

ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡಿದ್ದ ಅನಾಸ್ ನನ್ನು ಕುಂಬಳೆಯ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.

ರಸ್ತೆ ಬದಿಯ ಕಲ್ಲಿಗೆ ಬಡಿದು ಸ್ಕೂಟರ್ ಮಗುಚಿ ಬಿದ್ದು ಈ ದುರ್ಘಟನೆ ನಡೆದಿದೆ, ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *