Ad Widget .

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ!

ಸಮಗ್ರ ನ್ಯೂಸ್: ಮಂಗಳೂರು‌ ಹೊರವಲಯದ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟ ಅವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಕೂತಿದ್ದಾರೆ.
ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಇದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ ಅವರನ್ನು ನಂಬುವ ಹಾಗಿಲ್ಲ. ಪ್ರತಿಭಟನೆ ಎದುರಿಸಲು ಜಿಲ್ಲಾಡಳಿತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ಇದರಿಂದ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಲ್ಲಿಂದ ಟೋಲ್ ಗೇಟ್ ತೆರವುಗೊಳ್ಳುವ ತನಕ ಹಗಲು ರಾತ್ರಿ ಹೋರಾಟ ಮುಂದುವರಿಯಲಿದೆ” ಎಂದರು.

Ad Widget . Ad Widget .

ಡಿವೈ ಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, “ಟೋಲ್ ಜನರಿಂದ ವಸೂಲಿ ಮಾಡಿದ್ದು ಸಾಕು. ಸಂಸದರು, ಶಾಸಕರು ಇದು ಅಕ್ರಮ ಟೋಲ್ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಆದರೆ ತೆರವು ಮಾಡಲು ಮುಂದಾಗುತ್ತಿಲ್ಲ. ಇದರಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಈ ಟೋಲ್ ತೆರವು ಮಾಡದ ಹೊರಟು ನಾವ್ಯಾರೂ ಇಲ್ಲಿಂದ ತೆರಳುವುದಿಲ್ಲ” ಎಂದರು.

Ad Widget . Ad Widget .

ರಾತ್ರಿ ವೇಳೆಯಲ್ಲೂ ಸಮಿತಿ ಪದಾಧಿಕಾರಿಗಳು, ಸದಸ್ಯರು ಸ್ಥಳದಲ್ಲಿ ಧರಣಿ ಕೂತಿದ್ದಾರೆ. ಬಿ. ಕೆ. ಇಮ್ತಿಯಾಜ್, ರಾಘವೇಂದ್ರ ರಾವ್, ಎಂ. ಜಿ ಹೆಗಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ಅಭಯಚಂದ್ರ ಜೈನ್, ಪುರುಷೋತ್ತಮ್ ಚಿತ್ರಾಪುರ, ಮಾಜಿ ಶಾಸಕ ಮೊಯಿದೀನ್ ಬಾವಾ, ದಿನೇಶ್ ಹೆಗ್ಡೆ ಉಳೆಪಾಡಿ, ಹಯಾಜ್, ಮಂಜುಳಾ ನಾಯಕ್ ಮತ್ತಿತರರು ಧರಣಿ ಕೂತಿದ್ದಾರೆ.

Leave a Comment

Your email address will not be published. Required fields are marked *