Ad Widget .

ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ| ನಾಳೆಯಿಂದ ಹೊಸ ದರ ಜಾರಿ

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ದರಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್ ಗೆ ಪೆಟ್ರೋಲ್ ಹಾಗೂ ಡೀಸೆಲ್ ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ಬೆಲೆಗಳು ಮಂಗಳವಾರ(ನ.1)ದಿಂದ ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ಬರಲಿವೆ.

Ad Widget . Ad Widget .

ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ., ಮುಂಬೈನಲ್ಲಿ 106.31 ರೂ.
ಕೊಲ್ಕತ್ತಾ ದಲ್ಲಿ ಪೆಟ್ರೋಲ್ ಗೆ 106.03 ರೂ., ಚೆನ್ನೈನಲ್ಲಿ 102.63 ರೂ ಆಗಿದೆ.

Ad Widget . Ad Widget .

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

Leave a Comment

Your email address will not be published. Required fields are marked *