October 2022

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ

ಸಮಗ್ರ ನ್ಯೂಸ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು. ಪಾಕಿಸ್ತಾನ ನೀಡಿದ 160ರನ್​ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಉಪ ನಾಯಕ ಕೆ.ಎಲ್ ರಾಹುಲ್ ಹಾಗೂ ನಾಯಕ ರೋಹಿತ್​ ಶರ್ಮ 4 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ವಿರಾಟ್ ಕೊಹ್ಲಿ ಜೊತೆಯಾದ ಸೂರ್ಯ ಕುಮಾರ್ […]

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ Read More »

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ

ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಪ್ರಯುಕ್ತ 18 ಲಕ್ಷ ದೀಪೋತ್ಸವವನ್ನು ಉದ್ಘಾಟಿಸಿದರು. ನೇರಪ್ರಸಾರ ವೀಕ್ಷಣೆಗೆ ಕೆಳಗಿನ ಲಿಂಕ್ ಒತ್ತಿರಿ… ಅಯೋಧ್ಯೆಯಲ್ಲಿ ಈಗ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, 6ನೇ ವರ್ಷದ ದೀಪೋತ್ಸವದ ಅಂಗವಾಗಿ ಲೇಸರ್ ಶೋ ಪ್ರದರ್ಶನ ಸಹ ನಡೆಯುತ್ತಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ…

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ Read More »

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಅ.23 ರಂದು ಪುತ್ತೂರಿನ ಮುರದಲ್ಲಿ ನಡೆದಿದೆ. ಮೃತರನ್ನು ಕಲ್ಲೇಗ ನಿವಾಸಿ, ಕೂಲಿ ಕೆಲಸ ನಿರ್ವಹಿಸುತ್ತಿದ್ದ ವಿಜಯ ಎಂದು ಗುರುತಿಸಲಾಗಿದೆ. ವಿಜಯ ರವರು ಕಾರ್ಯಕ್ರಮವೊಂದಕ್ಕೆ ಬಂದು ವಾಪಸ್ಸು ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಜನ ಜಮಾಯಿಸಿದರು.

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ!

ಸಮಗ್ರ ನ್ಯೂಸ್: ಸಮಸ್ಯೆ ಹೇಳಲು ಬಂದ ಮಹಿಳೆಗೆ ವಸತಿ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರೋ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದಲ್ಲಿ ನಿನ್ನೆ 175 ಗ್ರಾಮಸ್ಥರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಂಜೆ 6.30ಕ್ಕೆ ಆಗಮಿಸಿದ್ದ ಸಚಿವರ ಬಳಿ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಸಂಭವಿಸಿತ್ತು. ಇದೇ ವೇಳೆ ಮಹಿಳೆ ಸಚಿವರ ಬಳಿ ತೆರಳಿದ್ದ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ! Read More »

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಪುಟ್ಟ ಕಂದಮ್ಮನ ಕೂದಲು ದಾನ ನೀಡಿದ ಪೋಷಕರು

ಸಮಗ್ರ ನ್ಯೂಸ್: ಎರಡು ವರ್ಷ ನಾಲ್ಕು ತಿಂಗಳು ವಯಸ್ಸಿನ ಮಗುವಿನ ಕೂದಲನ್ನು ಪೋಷಕರು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಮಂಗಳೂರು ಜಿಲ್ಲೆಯಲ್ಲಿ ನಡೆದಿದೆ. ನಗರದ ಮರೋಳಿಯ ಸುಮಲತಾ ಮತ್ತು ಭರತ್ ಕುಲಾಲ್ ಎಂಬುವರ ಪುತ್ರಿ ಆದ್ಯ ಕುಲಾಲ್ ಎಂಬ ಮಗುವಿನ ಕೂದಲನ್ನು ದಾನ ಮಾಡಲಾಗಿದೆ. ಕ್ಯಾನ್ಸರ್ ರೋಗಿಗಳಿಗೆ ವಿಗ್ ಮಾಡಲು ತನ್ನ ಕೂದಲನ್ನು ದಾನ ಮಾಡಿರುವ ಈ ಮಗು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಕುರಿತಾದ ಸುದ್ದಿಯನ್ನು ಮಂಗಳೂರು ದಕ್ಷಿಣ ಶಾಸಕ

ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಪುಟ್ಟ ಕಂದಮ್ಮನ ಕೂದಲು ದಾನ ನೀಡಿದ ಪೋಷಕರು Read More »

ಲೋಕಾಯುಕ್ತ ಐಜಿಪಿಯಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನೇಮಕ

ಸಮಗ್ರ ನ್ಯೂಸ್: ಲೋಕಾಯುಕ್ತ ಐಜಿಪಿಯಾಗಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಲೋಕಾಯುಕ್ತ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಲೋಕಾಯುಕ್ತ ಮರು ಸ್ಥಾಪನೆ ಬಳಿಕ ಮತ್ತೊಬ್ಬ ಖಡಕ್ ಐಪಿಎಸ್ ಅಧಿಕಾರಿ ಲೋಕಾಯುಕ್ತಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಸುಬ್ರಹ್ಮಣ್ಯೇಶ್ವರ ರಾವ್ ಸಿಬಿಐ ಬೆಂಗಳೂರು ಘಟಕದ ಎಸ್ ಪಿ ಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಲೋಕಾಯುಕ್ತ ಐಜಿಪಿಯಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನೇಮಕ Read More »

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಸಮಗ್ರ ನ್ಯೂಸ್: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ Read More »

ದ್ವಾದಶ ರಾಶಿಗಳ‌ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ… ಮೇಷ: ಈ ವಾರವು ಅನುಕೂಲಕರವಾಗಿದ್ದು ಅದು ನಿಮ್ಮನ್ನು ಆಶಾವಾದಿಯಾಗಿರಿಸುತ್ತದೆ ಮತ್ತು ಯಶಸ್ಸಿನ ದಾರಿಯನ್ನು ತೋರಿಸುತ್ತದೆ. ಮನೆ-ಕುಟುಂಬದ ಮೇಲ್ವಿಚಾರಣಾ ವ್ಯವಸ್ಥೆಯು ತೃಪ್ತಿಕರವಾಗಿರುತ್ತದೆ. ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ಕಳೆವ ಕ್ಷಣ ಸ್ಮರಣೀಯವಾಗಿರುತ್ತದೆ.ನಿಮ್ಮ ದೌರ್ಬಲ್ಯವು ಯಾರಿಗೂ

ದ್ವಾದಶ ರಾಶಿಗಳ‌ ವಾರಭವಿಷ್ಯ Read More »