October 2022

ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಹಲವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಸಭಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಹಲವರು ಗಂಭೀರ Read More »

ಹಿಂದೂ, ಕ್ರೈಸ್ತ, ಮುಸ್ಲಿಂ ಆಮದು ಮಾಡಿಕೊಂಡ ಧರ್ಮಗಳು – ಅಹಿಂಸಾ ಚೇತನ್

ಸಮಗ್ರ ನ್ಯೂಸ್ ‘ಹಿಂದೂ, ಕ್ರಿಶ್ಚಿಯನ್, ಇಸ್ಲಾಮ್ ಆಮದು ಮಾಡಿಕೊಂಡ ಧರ್ಮಗಳು’ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ”ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ, ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಮ್ ಧರ್ಮ ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ. ಎಲ್ಲಾ ಅಸಮಾನತೆಗಳನ್ನು ನಾವು

ಹಿಂದೂ, ಕ್ರೈಸ್ತ, ಮುಸ್ಲಿಂ ಆಮದು ಮಾಡಿಕೊಂಡ ಧರ್ಮಗಳು – ಅಹಿಂಸಾ ಚೇತನ್ Read More »

ವಿಜ್ಞಾನಿಗಳಿಂದ ಹೊಸ‌ ಮಾದರಿಯ ವೈರಸ್ ಅಭಿವೃದ್ಧಿ! ಮತ್ತೊಂದು ಮಹಾ ಮಾರಣಹೋಮಕ್ಕೆ ಸಾಕ್ಷಿಯಾಗಲಿದ್ಯಾ ಜಗತ್ತು? 80% ಹೆಚ್ಚು ಮರಣ ಪ್ರಮಾಣದ ತಾಕತ್ತು ಹೊಂದಿದೆ ಈ ತಳಿ!!

ಸಮಗ್ರ ನ್ಯೂಸ್: ಕೊರೋನಾ, ಓಮಿಕ್ರಾನ್‌, ಅದರ ರೂಪಾಂತರಿಗಳ ಹಾವಳಿ ಮಧ್ಯದಲ್ಲಿಯೇ ಕೋವಿಡ್ ರೂಪಾಂತರಗಳಾದ BF.7 ಮತ್ತು BA.5.1.7 ಹೆಚ್ಚಿನ ಹರಡುವಿಕೆಯೊಂದಿಗೆ ಸಾಂಕ್ರಾಮಿಕ ರೋಗದ ಭೀತಿಯನ್ನು ದುಪ್ಪಟ್ಟು ಮಾಡಿದೆ. ಈ ಎಲ್ಲಾ ಆತಂಕಗಳ ನಡುವೆ ಕೋವಿಡ್‌ ವೈರಸ್‌ ಅನ್ನೇ ಹೋಲುವ, ಅದರ ಗುಣಲಕ್ಷಣಗಳನ್ನು ಹಂಚಿಕೊಳ್ಳುವ, ಅದೇ ತರನಾದ ಜೀವಿಗಳ ನಿರ್ದಿಷ್ಟ ವೈರಸ್‌ ರೂಪಾಂತರದ ಹೊಸ ಸಂಶೋಧನೆ ಮತ್ತಷ್ಟು ಆತಂಕವನ್ನು ಸೃಷ್ಟಿ ಮಾಡಿದೆ. ಪ್ರಸ್ತುತ ಇದೇ ರೀತಿಯಾದ ಒಂದು ಸಂಶೋಧನೆ ನಡೆದಿದ್ದು, ಕೊರೋನಾ ಮತ್ತು ಓಮಿಕ್ರಾನ್‌ ವೈರಸ್‌ಗಳ ರೂಪಾಂತರವನ್ನು ಅಭಿವೃದ್ಧಿ

ವಿಜ್ಞಾನಿಗಳಿಂದ ಹೊಸ‌ ಮಾದರಿಯ ವೈರಸ್ ಅಭಿವೃದ್ಧಿ! ಮತ್ತೊಂದು ಮಹಾ ಮಾರಣಹೋಮಕ್ಕೆ ಸಾಕ್ಷಿಯಾಗಲಿದ್ಯಾ ಜಗತ್ತು? 80% ಹೆಚ್ಚು ಮರಣ ಪ್ರಮಾಣದ ತಾಕತ್ತು ಹೊಂದಿದೆ ಈ ತಳಿ!! Read More »

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ. 20ರಿಂದ ನ. 30ರ ವರೆಗೆ ಜಿಲ್ಲೆಯೊಳಗೆ ಮತ್ತು ಹೊರಜಿಲ್ಲೆ ಅಥವಾ ನೆರೆರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್‌ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಈ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ Read More »

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ

ಸಮಗ್ರ ನ್ಯೂಸ್: ಬ್ರಿಟನ್’ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸುವ ಮೂಲಕ ಟ್ರಸ್ ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಇನ್ನು ಮುಂದಿನ ವಾರದೊಳಗೆ ನಾಯಕತ್ವದ ಚುನಾವಣೆ ಪೂರ್ಣಗೊಳ್ಳಲಿದೆ. ‘ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನೀಡಿದ ಜನಾದೇಶವನ್ನು

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ Read More »

ಬೆಳಗಾವಿಯಲ್ಲಿ ಎಸ್ಎಸ್ಎಲ್ಸಿ ವಿಧ್ಯಾರ್ಥಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎಸೆಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು, ಕೊಲೆ ಮಾಡಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವರದಿಯಾಗಿದೆ.ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಹತ್ಯೆಗೀಡಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಗುರುವಾರ ಅರೆಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈತ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಯನ್ನು ಕೊಲೆಗೈಯಲು ನಿಖರ ಕಾರಣ ತಿಳಿದು

ಬೆಳಗಾವಿಯಲ್ಲಿ ಎಸ್ಎಸ್ಎಲ್ಸಿ ವಿಧ್ಯಾರ್ಥಿಯ ಬರ್ಬರ ಹತ್ಯೆ Read More »

ವಿವಾದಾತ್ಮಕ ಹೇಳಿಕೆ ಹಿನ್ನಲೆ| ನಟ ಚೇತನ್ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹೇಳಿಕೆಯಿಂದಾಗಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆಯುಂಟಾಗಿದೆ. ಹಾಗಾಗಿ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಹಿನ್ನಲೆ| ನಟ ಚೇತನ್ ವಿರುದ್ದ ದೂರು ದಾಖಲು Read More »

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್

ಸಮಗ್ರ ನ್ಯೂಸ್: ಹೋರಾಟಗಾರರು ನಮ್ಮೂರಲ್ಲಿ ಮದ್ಯದ ಅಂಗಡಿ ಬೇಡ ಎಂದು ಹೋರಾಟ, ಪ್ರತಿಭಟನೆ ಮಾಡುತ್ತಿರುವಾಗಲೇ ಪಕ್ಕದ‌ ಊರಲ್ಲಿ ರಾತ್ರೋರಾತ್ರಿ ವೈನ್ ಶಾಪ್ ಒಂದು ತಲೆ‌ ಎತ್ತಿದ್ದು‌‌ ಗ್ರಾಮಸ್ಥರು ಫುಲ್ ಶಾಕ್ ಅನುಭವಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಕಳೆದೆರಡು ವಾರಗಳ ಹಿಂದೆ ಕೊಲ್ಲಮೊಗ್ರುವಿಗೆ 6 ಕಿ.ಮೀ ದೂರವಿರುವ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಗ್ರಾಮದ ಸಮಾನ ಮನಸ್ಕ ಜನರು ಒಟ್ಟಾಗಿ ಮದ್ಯದಂಗಡಿ ವಿರುದ್ದ ಮುಗಿಬಿದ್ದಿದ್ದರು.

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್ Read More »

ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು. ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ

ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್ Read More »

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನ.1ರಂದುಕನ್ನಡ ರಾಜ್ಯೋತ್ಸವದ ದಿನ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ʼಕರ್ನಾಟಕ ರತ್ನ ಪ್ರಶಸ್ತಿ ʼ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ.ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »