October 2022

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ

ಸಮಗ್ರ ನ್ಯೂಸ್: ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್‌ ಮಹಲ್‌ ನಬೀಸ್‌ (87) ಭಾನುವಾರ ಕೋಲ್ಕತ್ತದಲ್ಲಿ (Kolkata) ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್‌ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರತಿಷ್ಠಿತ […]

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ Read More »

ಕೆಎಸ್ಆರ್ ಟಸಿ ಗೆ ಮೇಜರ್ ಸರ್ಜರಿ| ನಾಲ್ಕೂ ನಿಗಮಗಳ ವಿಲೀನ; ಇಂಧನ, ಸಿಬ್ಬಂದಿ ಕಡಿತಕ್ಕೆ ಚಿಂತನೆ

ಸಮಗ್ರ ನ್ಯೂಸ್: ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದತ್ತ ಮುನ್ನಡೆಸುವ ಉದ್ದೇಶದಿಂದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. 9 ಲಕ್ಷ ಕಿಲೋ ಮೀಟರ್ ಗಿಂತ ಹೆಚ್ಚು ಸಂಚಾರ ಮಾಡಿದ ಬಸ್ ಗಳನ್ನು ಗುಜರಿಗೆ ಹಾಕುವ ಬದಲು ಮರು ವಿನ್ಯಾಸಗೊಳಿಸಿ ಕಾರ್ಯಾಚರಣೆಗೆ ಬಿಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, 4 ಸಾರಿಗೆ ನಿಗಮಗಳ ವಿಲೀನದಿಂದ ಆಡಳಿತಾತ್ಮಕ, ಇಂಧನ, ಸಿಬ್ಬಂದಿ ವೆಚ್ಚ ಒಳಗೊಂಡಂತೆ ಸುಮಾರು ಶೇಕಡ

ಕೆಎಸ್ಆರ್ ಟಸಿ ಗೆ ಮೇಜರ್ ಸರ್ಜರಿ| ನಾಲ್ಕೂ ನಿಗಮಗಳ ವಿಲೀನ; ಇಂಧನ, ಸಿಬ್ಬಂದಿ ಕಡಿತಕ್ಕೆ ಚಿಂತನೆ Read More »

ದೇಶದಲ್ಲಿ ಇನ್ನೂ ಐದು ದಿನ ಭಾರೀ ಮಳೆ| ಚಂಡಮಾರುತ ಭೀತಿಯಲ್ಲಿ ಪೂರ್ವ ಕರಾವಳಿ

ಸಮಗ್ರ ನ್ಯೂಸ್: ಮುಂದಿನ ಐದು ದಿನಗಳಲ್ಲಿ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕ ಸೇರಿದಂತೆ ವಿದಾರ್ಭಾ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಿಂದ ನೈರುತ್ಯ ಮಾನ್ಸೂನ್ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಭೀತಿ!?ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈರು ತ್ಯ ಕೊಲ್ಲಿ ಬಂಗಾಳದ ಮೇಲೆ ಚಂಡಮಾರುತದ ಪರಿಚಲನೆ ಇದೆ. ಸೈಕ್ಲೋನಿಕ್ ಪರಿಚಲನೆ ಮುಂದಿನ 2-3 ದಿನಗಳಲ್ಲಿ ದಕ್ಷಿಣ ಪೆನಿನ್ಸುಲರ್ ಭಾರತದಾದ್ಯಂತ

ದೇಶದಲ್ಲಿ ಇನ್ನೂ ಐದು ದಿನ ಭಾರೀ ಮಳೆ| ಚಂಡಮಾರುತ ಭೀತಿಯಲ್ಲಿ ಪೂರ್ವ ಕರಾವಳಿ Read More »

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ|

ಸಮಗ್ರ ನ್ಯೂಸ್: ಅಸ್ವಸ್ಥಗೊಂಡಿದ್ದ ವೃದ್ಧೆಯನ್ನು ಬೀದಿನಾಯಿಗಳು ತಿಂದ ಬೀಭತ್ಸ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಅಪರಿಚಿತ ವಾಹನವೊಂದು ವೃದ್ಧೆಯನ್ನು ಡಿಕ್ಕಿ ಹೊಡೆದಿತ್ತು. ಈ ವೇಳೆ ವಾಹನ ಚಾಲಕ ವೃದ್ಧೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮತ್ತೆ ರಸ್ತೆ ಪಕ್ಕದಲ್ಲಿ ಬಿಸಾಡಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡ ವೃದ್ದೆಯನ್ನು 4 5 ಬೀದಿನಾಯಿಗಳು ಸೇರಿಕೊಂಡು ಸಂಪೂರ್ಣವಾಗಿ ತಿಂದುಹಾಕಿ ಅಸ್ತಿಪಂಜರ ರೂಪದಲ್ಲಿ ವೃದ್ದೆಯ ಶವ ಪತ್ತೆಯಾಗಿದೆ. ವೃದ್ಧೆಯ ಶವವನ್ನು

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ| Read More »

ಬಾಕ್ಸ್ ಚರಂಡಿ ಕಾಮಗಾರಿ: ಗ್ರಾ.ಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

ಸಮಗ್ರ ನ್ಯೂಸ್: ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಕೊಟ್ಟಿಗೆಹಾರ‌ದ ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದು ಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ

ಬಾಕ್ಸ್ ಚರಂಡಿ ಕಾಮಗಾರಿ: ಗ್ರಾ.ಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ Read More »

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಡಿ.ವೈ ಚಂದ್ರಚೂಡ್ ನೇಮಕ

ಸಮಗ್ರ ನ್ಯೂಸ್: ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಭಾರತದ ರಾಷ್ಟ್ರಪತಿಗಳು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಸಿಜೆಐ ಯು ಯು ಲಲಿತ್

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಡಿ.ವೈ ಚಂದ್ರಚೂಡ್ ನೇಮಕ Read More »

‘ಪಟಾಕಿ ನಿಮ್ದೇ ಆದ್ರೂ ನಾವ್ ಹೇಳ್ದಂಗೇನೇ ಹಚ್ಚಬೇಕು!’ |ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಹೊಸ ಗೈಡ್ ಲೈನ್ಸ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ‘ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ, ಒಂದು ವೇಳೆ ಕಂಡು ಬಂದರೆ ಮುಲಾಜಿ‍ಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ. ಒಂದು ವೇಳೆ ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಪಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ

‘ಪಟಾಕಿ ನಿಮ್ದೇ ಆದ್ರೂ ನಾವ್ ಹೇಳ್ದಂಗೇನೇ ಹಚ್ಚಬೇಕು!’ |ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಹೊಸ ಗೈಡ್ ಲೈನ್ಸ್ Read More »

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ

ಸಮಗ್ರ ನ್ಯೂಸ್: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ Read More »

ಸಿದ್ದಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು. ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್

ಸಿದ್ದಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ Read More »

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಟ್ಟದ ಮೇಲೆ 15ಕಟ್ಟೆಗಳನ್ನು ಕಟ್ಟುವ ಮೂಲಕ ಪ್ರಸಿದ್ದಿ ಪಡೆದಿದ್ದ ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ(83) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಮೃತರು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದರು. ವೃತ್ತಿಯಲ್ಲಿ ಕುರಿಗಾಹಿ ಆಗಿದ್ದ ಇವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿ ಪ್ರತಿ ಕಟ್ಟೆಗೂ ದೇವರ ಹಾಗೂ ತಮ್ಮ ಮೊಮ್ಮಕ್ಕಳ ಹೆಸರನ್ನು ಇಟ್ಟಿದ್ದರು. ಪರಿಸರ ಸಂರಕ್ಷಣೆಗಾಗಿ ಪಣ ತೊಟ್ಟಿದ ಇವರು ಬೆಟ್ಟದ ಮೇಲಿನ ಕಟ್ಟೆಗಳನ್ನು ಸಂರಕ್ಷಿಸುತ ಬೆಟ್ಟದ

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ Read More »