October 2022

ಓಲಾ, ಉಬರ್ ಆಟೋ ಮುಟ್ಟುಗೋಲಿಗೆ ಸಾರಿಗೆ ಸಚಿವ ಶ್ರೀರಾಮುಲು ಆದೇಶ

ಸಮಗ್ರ ನ್ಯೂಸ್: ಆಟೋರಿಕ್ಷಾವನ್ನು ನಿರ್ವಹಿಸುತ್ತಿರುವ ಕ್ಯಾಬ್ ಅಗ್ರಿಗೇಟರ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಶನಿವಾರ ಹೇಳಿದ್ದಾರೆ. ಆಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್ಗಳು ಆಟೋರಿಕ್ಷಾವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಸಾರಿಗೆ ಇಲಾಖೆಯ ನಿರ್ದೇಶನಗಳ ಹೊರತಾಗಿಯೂ ಇನ್ನೂ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದ ನಂತರ ಅವರು ಈ ಆದೇಶ ನೀಡಿದ್ದಾರೆ. ಉಲ್ಲಂಘನೆಗಳಿಗಾಗಿ’ ಓಲಾ ಮತ್ತು ಉಬರ್ ನಂತಹ ಅಗ್ರಿಗೇಟರ್ ಗಳಿಗೆ ನೋಟಿಸ್ ಗಳನ್ನು ನೀಡಲಾಗಿದೆ ಮತ್ತು ಮುಂದಿನ ಕ್ರಮವನ್ನು […]

ಓಲಾ, ಉಬರ್ ಆಟೋ ಮುಟ್ಟುಗೋಲಿಗೆ ಸಾರಿಗೆ ಸಚಿವ ಶ್ರೀರಾಮುಲು ಆದೇಶ Read More »

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಪಂದ್ಯಗಳ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಹಾಡುವ ಸಂಪ್ರದಾಯ ಮುಂದುವರಿಸಲಾಯಿತು. ಕನ್ನಡ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿರುವ ಪುಟಾಣಿ ವಂಶಿಕಾ ಅಂಜನಿ ಕಶ್ಯಪ ಟೂರ್ನಿಯ ಮೊದಲ ದಿನ ರಾಷ್ಟ್ರಗೀತೆ ಹಾಡಿದರು. ನಟ ಮಾಸ್ಟರ್ ಆನಂದ್ ಪುತ್ರಿಯಾಗಿರುವ 5 ವರ್ಷದ ವಂಶಿಕಾ, ಟೂರ್ನಿ ಇತಿಹಾಸದಲ್ಲಿ ಈ ಗೌರವ ಪಡೆದ ಅತ್ಯಂತ ಕಿರಿಯರೆನಿಸಿದರು. ಹೊಸತನದಿಂದ ಕೂಡಿದ ಬೆಂಗಳೂರು ಬುಲ್ಸ್ ತಂಡ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್​ನಲ್ಲಿ ಶುಭಾರಂಭ ಕಾಣುವಲ್ಲಿ ಯಶಸ್ವಿಯಾಗಿದೆ. ಉದ್ಯಾನನಗರಿಯ

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ Read More »

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ?

ಸಮಗ್ರ ನ್ಯೂಸ್: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಕಮೀಷನರೇಟ್ ನ್ಯಾಯಾಲಯಕ್ಕೆ 840 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಚಾರ್ಜ್ ಶೀಟ್ ನಲ್ಲಿನ ರಹಸ್ಯವೇನು?ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ? Read More »

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ

ಸಮಗ್ರ ನ್ಯೂಸ್: ಚಿರತೆಯ ಮುಖವನ್ನು ಬಳಸಿ ಗರ್ಭಿಣಿಯರಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಬಜಿಲಕೇರಿ ಅವರು ಫೇಸ್‌ಬುಕ್‌ನಲ್ಲಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ‌’ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪೋಸ್ಟ್ ಹಾಕಿದ್ದರು. ಇದು ಗರ್ಭಿಣಿಯರಿಗೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡುವ ಅವಮಾನವಾಗಿದೆ ಎಂದು ಎಡಪದವು ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿಂದೆ ಸುನೀಲ್ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ Read More »

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ

ಸಮಗ್ರ ನ್ಯೂಸ್: ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಬಾಧೆಗೊಳಗಾಗಿರುವ ಉರಗದ ಆರೋಗ್ಯ ಸ್ಥಿರವಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಇರುವೆಗಳು ಹಾವನ್ನು ಕಚ್ಚುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರ ತಿಳಿದು ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿದ್ದಾರೆ. ಪ್ರಾಧಿಕಾರ

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ Read More »

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು

ಸಮಗ್ರ‌ ನ್ಯೂಸ್: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದ ಬಳಿಯ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟವನನ್ನು ತಡಲಗಿ ಗ್ರಾಮದ ರೈತ ಹನುಮಂತ ಈರಪ್ಪ ಹಡಪದ (45) ಎಂದು ಗುರುತಿಸಲಾಗಿದೆ. ಈತ ಅ.5 ರಂದು ಮನೆಯಿಂದ ಕುರಿಗಳನ್ನು ಮೇಯಿಸಲು ಹೋಗುವುದಾಗಿ ಹೇಳಿ ಕುರಿಗಳನ್ನು ದಡ್ಡಿಯಲ್ಲಿ ಬಿಟ್ಟು ಮರಳಿ ಬರುವಾಗ ಈ ಘಟನೆ ಸಂಭವಿಸಿದ್ದು, ಈತ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಕಾಲುವೆಯಲ್ಲಿ ನೀರು ಕುಡಿಯಲು ಹೋದ ವೇಳೆ ಮೂರ್ಛೆ ಬಂದು ಕಾಲು

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು Read More »

5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಅ.12ಕ್ಕೆ ಉನ್ನತ ಮಟ್ಟದ ಸಭೆ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಪರಿಶೀಲನೆಗೆ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಪರೀಕ್ಷೆಯನ್ನು ಯಾವ ವರ್ಷದಿಂದ ನಡೆಸಬೇಕು ಎಂಬುದು ಅಕ್ಟೋಬರ್ 12 ರಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರವಾಗಲಿದೆ.

5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಅ.12ಕ್ಕೆ ಉನ್ನತ ಮಟ್ಟದ ಸಭೆ Read More »

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ ಬೊಮ್ಮಾಯಿ ಅವರು ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್ 2 ರಲ್ಲಿ ನಿರ್ಣಾಯಕ ವಿಜಯವನ್ನು ಸಾಧಿಸಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿರುವ ಟೈಟಾನ್ ಬಿಸಿನೆಸ್

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ Read More »