October 2022

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಪ್ಟ್| ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಹಾಗೂ ದೀಪಾವಳಿ ಗಿಫ್ಟ್ ಎನ್ನುವಂತೆ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು. ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು […]

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಪ್ಟ್| ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ Read More »

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿರುವ ಶಿರಗುಪ್ಪಿ ಶುಗರ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿದ್ದ ಪರಿಣಾಮವಾಗಿ ಕಾರ್ಮಿಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ದೀಲಿಪ ಚೋಟಿಲಾಲ ಯಾದವ್ ಎಂದು ತಿಳಿದು ಬಂದಿದೆ ಕಾಗವಾಡ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಕಾಗವಾಡ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು Read More »

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಸಮಗ್ರ ನ್ಯೂಸ್: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆಯಾದ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾ ರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ Read More »

ಹುಣಸೂರು: ಹಾವು ಕಚ್ಚಿ ರೈತ ಸಾವು

ಸಮಗ್ರ ನ್ಯೂಸ್: ಹುಣಸೂರು ತಾಲ್ಲೂಕಿನ ಉದ್ದೂರು ಗ್ರಾಮದ ನಂಜುಂಡೇಗೌಡ ಎಂಬವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಜುಂಡೇಗೌಡರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತರು ಪತ್ನಿಯರು, ಪುತ್ರರನ್ನು ಅಗಲಿದ್ದಾರೆ.

ಹುಣಸೂರು: ಹಾವು ಕಚ್ಚಿ ರೈತ ಸಾವು Read More »

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರಿನ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಈ ಪೂಜೆ ನಡೆದಿದೆ ಎನ್ನಲಾಗಿದ್ದು, ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪೂಜೆಯಲ್ಲಿ ಲಾಂಗ್, ಕತ್ತಿ, ಏರ್ ಗನ್ ಮೊದಲಾದವುಗಳನ್ನು ಇರಿಸಿ ಪೂಜೆ ಸಲ್ಲಿಸಲಾಗಿದ್ದು, ಇವುಗಳನ್ನು ಯಾರು ಬಳಸುತ್ತಿದ್ದರು ? ವಿಡಿಯೋ ನೋಡಿಯೂ ಪೊಲೀಸರು ಸುಮ್ಮನಿರುವುದು ಏಕೆ ಎಂಬ

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಜನಪ್ರಿಯ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ದಿವ್ಯಾ ಶ್ರೀಧರ್ ಇದೀಗ ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ‘ಸೇವಂತಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಚೆಲುವೆ ವೈವಾಹಿಕ ಜೀವನದ ಗುಟ್ಟು ರಟ್ಟು ಮಾಡಿದ್ದಾರೆ. ಪತಿ ಮೋಸ ಮಾಡುತ್ತಿದ್ದಾನೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮಿಳು ಸೀರಿಯಲ್‌ನಲ್ಲಿ ನಟಿಸುವಾಗ ದಿವ್ಯಾ ಶ್ರೀಧರ್‌ಗೆ ಆರ್ನವ್ ಪರಿಚಯ ಆಗಿದೆ. ದಿವ್ಯಾಳನ್ನು ಪ್ರೀತಿಸಬೇಕು ಎಂದು ಅಮ್ಜದ್ ​ಖಾನ್ ಎಂದು ನಿಜವಾದ ಹೆಸರನ್ನು ಹೇಳದೇ

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್ Read More »

ವಿಧಾನಸಭಾ ಚುನಾವಣೆ ಹಿನ್ನಲೆ| ಕರಾವಳಿ ಮೇಲೆ ಕಣ್ಣಿಟ್ಟ ಪ್ರಮೋದ್ ಮುತಾಲಿಕ್| ಉಡುಪಿ, ದ.ಕ ದಲ್ಲಿ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಹದಿಮೂರು ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಪ್ರಮೋದ್ ಮುತಾಲಿಕ್ ನವರಾತ್ರಿ ಸಂದರ್ಭದಲ್ಲಿ ಉಡುಪಿ ಪ್ರವಾಸ ಕೈಗೊಂಡಿದ್ದ ವೇಳೆ ಉಡುಪಿ ಜಿಲ್ಲೆಯಿಂದಲೇ ಕಣಕ್ಕಿಳಿಯಬೇಕೆಂದು ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ದಕ್ಷಿಣ ಕನ್ನಡ

ವಿಧಾನಸಭಾ ಚುನಾವಣೆ ಹಿನ್ನಲೆ| ಕರಾವಳಿ ಮೇಲೆ ಕಣ್ಣಿಟ್ಟ ಪ್ರಮೋದ್ ಮುತಾಲಿಕ್| ಉಡುಪಿ, ದ.ಕ ದಲ್ಲಿ ಸ್ಪರ್ಧೆ ಸಾಧ್ಯತೆ Read More »

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ!

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಇಂದಿಗೆ ಏಳು ದಿನಗಳಾಗಿವೆ. ಮೊದಲನೇ ದಿನದಿಂದಲೂ ಈವರೆಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೂಲಗಳ ಪ್ರಕಾರ 25 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎಂದು ಹೇಳಲಾಗುತ್ತಿದೆ. ಪ್ರತಿ ಪ್ರೇಕ್ಷಕನೂ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದರೆ, ಶಿವಮೊಗ್ಗದಲ್ಲಿ ವಿಕೃತ ಮನಸ್ಸಿನವರು ಅವಹೇಳನ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಕಾಂತಾರ ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದ್ದು, ಶಿವಮೊಗ್ಗದ ಗೋಡೆ ಗೋಡೆಗಳ ಮೇಲೆ ಕಾಂತಾರ ಸಿನಿಮಾದ ಪೋಸ್ಟರ್ ರಾರಾಜಿಸುತ್ತಿದೆ.

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ! Read More »

ಸೋನಿಯಾ ಗಾಂಧಿಯ ಶೂ ಲೇಸ್ ಕಟ್ಟಿದ ರಾಹುಲ್| ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ಟೀಂ ಮಾಡಿದ್ದೇನು ಗೊತ್ತಾ? ಇಲ್ಲಿದೆ ಅಸಲಿ ಸುದ್ದಿ…

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲಿ ಅವರು ವಯಸ್ಸಾದ ವ್ಯಕ್ತಿ ಅಥವಾ ಮಗುವಿನೊಂದಿಗೆ ಇರುವ ಫೋಟೋಗಳು ಕಾಣಿಸಿಕೊಳ್ಳುತ್ತಿವೆ. ಇದೀಗ ಬಿಜೆಪಿ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿಗಳು ರಾಹುಲ್ ಅವರ ಈ ವೈರಲ್ ಚಿತ್ರಗಳನ್ನು ಎದುರಿಸುವುದು ಹೇಗೆ ಎಂಬ ಕಠಿಣ ಸಮಸ್ಯೆಗೆ ಸಿಲುಕಿದ್ದಾರೆ. ಸದ್ಯಕ್ಕೆ ಬಿಜೆಪಿಯ ತಂತ್ರ ಏನೆಂದರೆ ರಾಹುಲ್ ಫೋಟೋ ವೈರಲ್ ಆದ ತಕ್ಷಣ ಬಿಜೆಪಿಯ ಸೋಶಿಯಲ್ ಮೀಡಿಯಾ ಟೀಮ್

ಸೋನಿಯಾ ಗಾಂಧಿಯ ಶೂ ಲೇಸ್ ಕಟ್ಟಿದ ರಾಹುಲ್| ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ಟೀಂ ಮಾಡಿದ್ದೇನು ಗೊತ್ತಾ? ಇಲ್ಲಿದೆ ಅಸಲಿ ಸುದ್ದಿ… Read More »

ಮೊಬೈಲ್, ಟಿವಿ ಹುಚ್ಚು ಬಿಡಿಸಲು ನಡೆಯುತ್ತೆ ಡಿಜಿಟಲ್ ಲಾಕ್ ಡೌನ್| ಆ ಸೈರನ್ ಮೊಳಗಿದ ಕೂಡಲೇ ಎಲ್ಲವೂ ಬಂದ್| ಈ ಗ್ರಾಮದಲ್ಲೊಂದು ವಿಶಿಷ್ಟ ನಿಯಮ

ಸಮಗ್ರ ನ್ಯೂಸ್: ಮಕ್ಕಳನ್ನು ಮೊಬೈಲ್‌ ಗೀಳಿನಿಂದ ಹೊರತಂದು, ಕಲಿಕೆ ಯತ್ತ ಆಕರ್ಷಿಸಲು ಇಲ್ಲೊಂದು ಗ್ರಾಮದಲ್ಲಿ ‘ಡಿಜಿಟಲ್‌ ಲಾಕ್‌ಡೌನ್‌’ ಘೋಷಿಸಲಾಗಿದೆ. ನಿತ್ಯ ಸಂಜೆ 7ರಿಂದ 8.30ರವರೆಗೆ ಮೊಬೈಲ್‌, ಟಿ.ವಿ ಬಳಕೆ ನಿಷೇಧಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾಂವ್‌ ತಾಲ್ಲೂಕಿನ ಮೋಹಿತೆ ವಡಗಾಂವ ಗ್ರಾಮಸ್ಥರು ಇಂತಹ ನಿರ್ಣಯ ಕೈಗೊಂಡಿದ್ದಾರೆ. ಆ.14ರಿಂದ ಹೊಸ ಪದ್ಧತಿ ಜಾರಿಯಾಗಿದ್ದು, ಸಂಜೆ ಹೊತ್ತಿನಲ್ಲಿ ಮಕ್ಕಳು ಮೊಬೈಲ್‌ ಬದಿಗಿರಿಸಿ ಅಭ್ಯಸಿಸುತ್ತಿದ್ದಾರೆ. ಗ್ರಾಮದ ಜನಸಂಖ್ಯೆ ಸುಮಾರು 3 ಸಾವಿರ. 450 ಮಕ್ಕಳು ತಮ್ಮೂರಿನಲ್ಲೇ 1ರಿಂದ 10ನೇ ತರಗತಿಯಲ್ಲಿ ಓದುತ್ತಿದ್ದಾರೆ.

ಮೊಬೈಲ್, ಟಿವಿ ಹುಚ್ಚು ಬಿಡಿಸಲು ನಡೆಯುತ್ತೆ ಡಿಜಿಟಲ್ ಲಾಕ್ ಡೌನ್| ಆ ಸೈರನ್ ಮೊಳಗಿದ ಕೂಡಲೇ ಎಲ್ಲವೂ ಬಂದ್| ಈ ಗ್ರಾಮದಲ್ಲೊಂದು ವಿಶಿಷ್ಟ ನಿಯಮ Read More »