October 2022

ಮೈಸೂರು: ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿ| ಅರಮನೆ ನಗರಿಯಲ್ಲಿ ಭರದ ಸಿದ್ದತೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ನಾಳೆ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಇಂದು ನಾಡಿನಲ್ಲೆಡೆ ಆಯುಧ ಪೂಜೆ ನಡೆಯುತ್ತಿದ್ದು, ವಿಜಯದಶಮಿ ಅಂಗವಾಗಿ ನಾಳೆ ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ ಆರಂಭವಾಗಲಿದೆ. ಬುಧವಾರ ಮಧ್ಯಾಹ್ನ 2: 36 ರಿಂದ 2:50 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿದ್ವಜ ಪೂಜೆ ನಡೆಯಲಿದ್ದು, ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದೆ. ದೇವಿ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ […]

ಮೈಸೂರು: ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿ| ಅರಮನೆ ನಗರಿಯಲ್ಲಿ ಭರದ ಸಿದ್ದತೆ Read More »

ಪ್ರಿಯಕರನೊಂದಿಗೆ ಪರಾರಿಯಾದ ಮಗಳು| ತಂದೆ, ತಾಯಿ, ಸಹೋದರ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಿಯಕರನೊಂದಿಗೆ ಪರಾರಿಯಾದ ಮಗಳು| ತಂದೆ, ತಾಯಿ, ಸಹೋದರ ಆತ್ಮಹತ್ಯೆಗೆ ಶರಣು Read More »

ಆಯುಧ ಪೂಜೆ, ಮಹಾನವಮಿಗೆ ಕಳೆಗಟ್ಟಿದ ಮೈಸೂರು| ಸಾಂಸ್ಕೃತಿಕ ನಗರಿಯಲ್ಲಿ ಪೂಜಾ ವಿಧಿವಿಧಾನಗಳಿಗೆ ಚಾಲನೆ

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತಾದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಅರಮನೆಯಲ್ಲಿ ಮುಂಜಾನೆ 5.30 ರಿಂದಲೇ ಆಯುಧಪೂಜೆ ಕೈಂಕರ್ಯಗಳು ಆರಂಭವಾಗಿದ್ದು, ಮಧ್ಯಾಹ್ನ1.30 ರವರೆಗೆ ಪೂಜೆಗಳು ನಡೆಯಲಿವೆ. ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜಾ ವಿಧಾನಗಳನ್ನು ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ, ಪೂಜಾ ವಿಧಿ ವಿಧಾನ ಆರಂಭವಾಗಿದೆ. 07.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು ಹಾಗೂ ಪಟ್ಟದ ಕುದುರೆ ಆಗಮನವಾಗಲಿದೆ. 8.10ಕ್ಕೆ ರಾಜರ

ಆಯುಧ ಪೂಜೆ, ಮಹಾನವಮಿಗೆ ಕಳೆಗಟ್ಟಿದ ಮೈಸೂರು| ಸಾಂಸ್ಕೃತಿಕ ನಗರಿಯಲ್ಲಿ ಪೂಜಾ ವಿಧಿವಿಧಾನಗಳಿಗೆ ಚಾಲನೆ Read More »

ಅನುಕಂಪದ ಆಧಾರದ ಸರ್ಕಾರಿ ನೌಕರಿ ಹಕ್ಕಲ್ಲ| ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಅನುಕಂಪದ ಸರ್ಕಾರಿ ನೌಕರಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ನೌಕರಿಯು ಹಕ್ಕಲ್ಲ ಎಂದು ಅಭಿಪ್ರಾಯಪಟ್ಟಿದೆ. ಅನುಕಂಪದ ನೌಕರಿ ಒಂದು ರೀತಿಯ ವಿನಾಯಿತಿಯೇ ಹೊರತು ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ

ಅನುಕಂಪದ ಆಧಾರದ ಸರ್ಕಾರಿ ನೌಕರಿ ಹಕ್ಕಲ್ಲ| ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು Read More »

“ಹೆಸರು ಬದಲಿಸಲು ನಂಗೆ ತಲೆಕೆಟ್ಟಿಲ್ಲ” | ಶೋಭಾ ಕರಂದ್ಲಾಜೆ ಸ್ಪಷ್ಟನೆ

ಸಮಗ್ರ ನ್ಯೂಸ್: ಹೆಸರು ಬದಲಾಯಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ಎಂದು ಕೇಂದ್ರ ಸಚಿವೆ ಶೋಭಾ ಕೆರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ ಎಂದು ಹೇಳಿದರು. ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ‘ರಾಜಕಾರಣಿಗಳನ್ನು ಕೆಲವರು ಜೋಕರ್ ಅಂದುಕೊಂಡಿದ್ದಾರೆ. ಮಾಧ್ಯಮ, ಸಾಮಾಜಿಕ

“ಹೆಸರು ಬದಲಿಸಲು ನಂಗೆ ತಲೆಕೆಟ್ಟಿಲ್ಲ” | ಶೋಭಾ ಕರಂದ್ಲಾಜೆ ಸ್ಪಷ್ಟನೆ Read More »

ಸುರಿವ ಜಡಿಮಳೆಯಲ್ಲೂ ಬತ್ತದ ಉತ್ಸಾಹ| ಮಳೆ ನಡುವೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಷಣ

ಸಮಗ್ರ ನ್ಯೂಸ್: ಭಾರತ ಜೋಡೊ ಯಾತ್ರೆ ತಮಿಳುನಾಡು ಮತ್ತು ಕೇರಳವನ್ನು ಮುಗಿಸಿ ಕರ್ನಾಟಕಕ್ಕೆ ಬಂದು ತಲುಪಿದೆ. ಕಳೆದೆರಡು ದಿನಗಳಿಂದ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಭಾನುವಾರ ಮೈಸೂರು ಜಿಲ್ಲೆಯ ಬಂಡಿಪಾಳ್ಯ ಸಮೀಪ ರಾಹುಲ್‌ ಗಾಂಧಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ವೇದಿಕೆಯ ಮೇಲೆ ರಾಹುಲ್‌ ಗಾಂಧಿ ಮಾತನಾಡುವ ವೇಳೆ ಜೋರು ಮಳೆ ಆರಂಭವಾಗಿದೆ. ಆದರೆ ಇದಕ್ಕೆ ತಲೆ ಕೆಡಿಸಿಕೊಳ್ಳದ ರಾಹುಲ್‌ ಗಾಂಧಿ ಮಳೆಯಲ್ಲೇ ಮಾತು ಮುಂದುವರೆಸಿದ್ದಾರೆ. ಭಾರತ ಜೋಡೊ ಯಾತ್ರೆ ಮಳೆ – ಗಾಳಿ ಅಥವಾ ಸುನಾಮಿ ಬಂದರೂ

ಸುರಿವ ಜಡಿಮಳೆಯಲ್ಲೂ ಬತ್ತದ ಉತ್ಸಾಹ| ಮಳೆ ನಡುವೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಷಣ Read More »

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಸಿಬಿಐ ಆಕಸ್ಮಿಕ ಎಂದು ಹೇಳಿ ವರದಿ ಸಲ್ಲಿಸಿದೆ. ಇಂದು(ಅ. ೩) ಹೊನ್ನಾವರದ ಕೋರ್ಟ್ ಗೆ ವರದಿ ಸಲ್ಲಿಸಿರುವ ಸಿಬಿಐ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮುಹತ್ಯೆ ಅಲ್ಲ ಎಂದು ಹೇಳಿದೆ. ಏನಿದು ಪ್ರಕರಣ?ಕಳೆದ 2017ರ ಡಿಸೆಂಬರ್ ತಿಂಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು.

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ Read More »

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ

ಸಮಗ್ರ ನ್ಯೂಸ್: ಇನ್ನೂ ಬಾಳಿ ಬದುಕಬೇಕಾದ ಆ ಬಾಲಕಿಯೋರ್ವಳು ವಿಚಿತ್ರವಾದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಈಕೆಯ ಡೆತ್ ನೋಟ್ ವೈರಲ್ ಅಗ್ತಿದೆ. ಜಿಲ್ಲೆಯ ಸಿಂಧನೂತಿನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಸಾರಿಕಾಳ ಸಾವಿನಿಂದ ಊರಿನವರೆಲ್ಲ ದಿಗ್ಭ್ರಮೆಗೆ ಒಳಗಾಗಿದ್ದರು. ಆಕೆಯ ಮನೆಯವರು ಮಗಳನ್ನು ಕಳೆದುಕೊಂಡ ಶೋಕದಲ್ಲಿದ್ದ ಸಂದರ್ಭದಲ್ಲಿ ಆಕೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ ನೋಟ್ ಸಿಕ್ಕಿದೆ. ಆ ಪತ್ರ ನೋಡಿ ಎಲ್ಲರೂ

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ Read More »

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ

ಸಮಗ್ರ ನ್ಯೂಸ್: ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅ.2ರ ತಡರಾತ್ರಿ ಬೆಳಕಿಗೆ ಬಂದಿದೆ. ಸಿಕ್ಕಿಬಿದ್ದಾಕೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ Read More »

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »