October 2022

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್

ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕಾಕ್‍ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಮುಂಗುಸಿ ಹಾಗೂ ಕ್ಯೂಕಸ್ ಅನ್ನು ಚೀಲದಲ್ಲಿ ಮರೆ ಮಾಡಲಾಗಿತ್ತು. ಈ ಎಲ್ಲಾ ಪ್ರಾಣಿಗಳು ಬ್ಯಾಂಕಾಕ್‍ನಿಂದ ಬಂದ ಪ್ರಯಾಣಿಕನ ಬ್ಯಾಗ್‍ನಲ್ಲಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಥೈಲ್ಯಾಂಡ್‍ಗೆ ಕಳುಹಿಸಿದ್ದಾರೆ. ಮುಂಗುಸಿ ಅಂಗೋಲಾ, ಉತ್ತರ ನಮೀಬಿಯಾ, ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್, ಜಾಂಬಿಯಾ ಮತ್ತು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿರುವ ಮುಂಗುಸಿ […]

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್ Read More »

ಮಂಗಳೂರು: ವಾಕಿಂಗ್ ವೇಳೆ ಲಾರಿ ಢಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ , ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಅ.೨೬ ರ ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದರು. ಈ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಮಂಗಳೂರು: ವಾಕಿಂಗ್ ವೇಳೆ ಲಾರಿ ಢಿಕ್ಕಿಯಾಗಿ ವ್ಯಕ್ತಿ ಸಾವು Read More »

ರಾಜ್ಯದಲ್ಲಿ ಕುಸಿದ ತಾಪಮಾನ| ಮೈಕೊರೆಯುವ ಚಳಿಗೆ ಜನತೆ ತತ್ತರ

ಸಮಗ್ರ ನ್ಯೂಸ್ : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಟ ತಾಪಮಾನ ದಾಖಲಾಗಿದೆ. ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

ರಾಜ್ಯದಲ್ಲಿ ಕುಸಿದ ತಾಪಮಾನ| ಮೈಕೊರೆಯುವ ಚಳಿಗೆ ಜನತೆ ತತ್ತರ Read More »

ಕನ್ನಡ ನಟಿಗೆ ನಗ್ನ ಪೋಟೋ, ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್| 30 ಲಕ್ಷ ಡಿಮ್ಯಾಂಡ್ ಮಾಡಿದ್ದ ಮೇಕಪ್ ಮ್ಯಾನ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರನಟಿಗೆ ಬ್ಲಾಕ್ ಮೇಲ್ ಮಾಡಿ, ನಗ್ನ ಫೋಟೋ, ವಿಡಿಯೋ ಮೂಲಕ ಬೆದರಿಕೆಯೊಡ್ಡಿ 30 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ ಮೇಕಪ್ ಮ್ಯಾನ್ ಸೆರೆಯಾಗಿದ್ದಾನೆ. ಕನ್ನಡದ ಚಿತ್ರನಟಿಯೊಬ್ಬರ ನಗ್ನ ವಿಡಿಯೋ ಹಾಗೂ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಲು ಯತ್ನಿಸಿದ ಮಹಾಂತೇಶ್ ಎಂಬಾತನನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭುವನೇಶ್ವರ ನಗರದ ನಿವಾಸಿ ಮಹಾಂತೇಶ್ ಸಂತ್ರಸ್ತ ನಟಿಯ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಅಲ್ಲದೇ ಆತ ನಟಿಯ ಸಂಬಂಧಿಕನಾಗಿದ್ದ

ಕನ್ನಡ ನಟಿಗೆ ನಗ್ನ ಪೋಟೋ, ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್| 30 ಲಕ್ಷ ಡಿಮ್ಯಾಂಡ್ ಮಾಡಿದ್ದ ಮೇಕಪ್ ಮ್ಯಾನ್ ಅರೆಸ್ಟ್ Read More »

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್

ಸಮಗ್ರ ನ್ಯೂಸ್: ದಾಂಪತ್ಯದಲ್ಲಿನ ಸಣ್ಣ ಸಣ್ಣ ಜಗಳಗಳು, ಸಂಶಯಗಳು, ಮುಂದೆ ಅನಾಹುತಕ್ಕೆ ಕಾರಣವಾಗುತ್ತದೆ. ಹೀಗೆ ಅನುಮಾನದ ಮೇಲೆ ಅಥವಾ ಆಕ್ರೋಶದ ವೇಳೆ ಪತಿಯನ್ನು ಕುಡುಕ ಅಥವಾ ಅಕ್ರಮ ಸಂಬಂಧ ಹೊಂದಿದವ ಎಂದು ಕರೆಯುವುದು ಕ್ರೌರ್ಯಕ್ಕೆ ಸಮ. ಇದು ಶಿಕ್ಷೆಗೆ ಅರ್ಹ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಒಂದುವೇಳೆ ಸಂಶಯದ ಮೇಲೆ ಏನೋ ಕರೆದು ಎಡವಟ್ಟು ಮಾಡಿಕೊಂಡರೆ, ಪತ್ನಿ ತಾನು ಮಾಡಿರುವ ಆರೋವನ್ನು ಸಾಬೀತುಪಡಿಸಲು ಸಾಧ್ಯವಾಗದೇ ಹೋದರೆ ಶಿಕ್ಷೆಗೆ ಗುರಿಯಾಗುತ್ತಾಳೆ. ಇದೀಗ ಗಂಡನ ವಿರುದ್ಧ ಸಿಟ್ಟಿನ

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್ Read More »

ವಿಜಯಪುರ: ಸಾಪ್ಟವೇರ್ ಇಂಜಿನಿಯರ್ ನ ಕೃಷಿ ಪ್ರೀತಿ| ಸೀಬೆ ಬೆಳೆಯಲ್ಲಿ ಯಶ ಕಂಡ ಶಿವಾನಂದ

ಸಮಗ್ರ ನ್ಯೂಸ್ : ಆತ ವೃತ್ತಿಯಲ್ಲಿ‌ ಸಾಪ್ಟ್ ವೇರ್ ಇಂಜಿನಿಯರ್. ಆದರೆ ಪ್ರವೃತ್ತಿಯಲ್ಲಿ ಕೃಷಿಕ. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ ಕ್ಷೇತ್ರದ ಕಾಖಂಡಕಿ ಗ್ರಾಮದ ಶಿವಾನಂದ ಸುನಗಡ್ ಅವರ ತೋಟದಲ್ಲಿ ಪೇರು (ಸೀಬೆ) ಗಿಡಗಳಲ್ಲಿ ಸಾಕಷ್ಟು ಫಲ ದೊರೆಯುತ್ತಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಅವರು ಪ್ರವೃತ್ತಿಯಲ್ಲಿ ಪೇರಳೆ ಹಣ್ಣು ಬೆಳೆಗಾರರಾಗಿ ಯಶಸ್ವಿಯಾಗುತ್ತಿದ್ದು, ಎಕರೆಯೊಂದಕ್ಕೆ ಸುಮಾರು ರೂ. 5 ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ವಿಜಯಪುರ ಜಿಲ್ಲೆಯ BLDE ಎಂಜಿನಿಯರಿಂಗ್ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿರುವ ಶಿವಾನಂದ್ ಅವರಿಗೆ

ವಿಜಯಪುರ: ಸಾಪ್ಟವೇರ್ ಇಂಜಿನಿಯರ್ ನ ಕೃಷಿ ಪ್ರೀತಿ| ಸೀಬೆ ಬೆಳೆಯಲ್ಲಿ ಯಶ ಕಂಡ ಶಿವಾನಂದ Read More »

ಬೆಳ್ತಂಗಡಿ: ಒಂದೇ ಮನೆಯಲ್ಲಿ ಇಬ್ಬರು ಮಕ್ಕಳ ದುರಂತ ಸಾವು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ

ಬೆಳ್ತಂಗಡಿ: ಒಂದೇ ಮನೆಯಲ್ಲಿ ಇಬ್ಬರು ಮಕ್ಕಳ ದುರಂತ ಸಾವು Read More »

ಶಿವಮೊಗ್ಗ: ತಡರಾತ್ರಿ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬಾತನನ್ನು ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ನನ್ನು ಹತ್ಯೆ ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ. ಘಟನಾ ಸ್ಥಳದ ಬಳಿ ಸಿಸಿ ಟಿವಿ ಫೂಟೇಜ್ ಸಿಕ್ಕಿದೆ. ಅವರಿಗೆ ಗೊತ್ತಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರುವಂತೆ ತೋರುತ್ತಿದೆ. ವೈಯಕ್ತಿಕ ಕಾರಣದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆ

ಶಿವಮೊಗ್ಗ: ತಡರಾತ್ರಿ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು Read More »

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ

ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆಯನ್ನು ಮುಂಬೈ ಕೋರ್ಟ್ ವಿಧಿಸಿದೆ. ಈ ವೇಳೆ ಮುಂಬೈ ಕೋರ್ಟ್ ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ Read More »

ಬಂಟ್ವಾಳ: ಲಾರಿ-ಬೈಕ್ ಅಪಘಾತ|ಬೈಕ್ ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ರಾಯಿ ಸಮೀಪದ ಕೊಯಿಲ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಮಂಗಳೂರು ಬರ್ಕೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಈಚರ್ ಲಾರಿ ಮತ್ತು ಪಲ್ಸರ್ ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಂಟ್ವಾಳ: ಲಾರಿ-ಬೈಕ್ ಅಪಘಾತ|ಬೈಕ್ ಸವಾರ ಸ್ಥಳದಲ್ಲೇ ಸಾವು Read More »