ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ.

Ad Widget ... ..

ಘಟನೆ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರಕಾರವು ಎನ್ನೈಎಗೆ ವಹಿಸಲಾಗಿದ್ದು ಎನ್ ಐ ಎ ತನಿಖೆ ವಹಿಸಿಕೊಳ್ಳಲು ತಡ ಆದ ಕಾರಣದಿಂದ ಕೆಲ ಆರೋಪಿಗಳು ತುಂಬಾ ಹುಷಾರಾಗಿದ್ದು ತಪ್ಪಿಸಿಕೊಂಡಿದ್ದರು.

Ad Widget

ಈಗ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರು ಆರೋಪಿಗಳ ಪತ್ತೆಗೆ ಈಗ ಎನ್‌ಐಎ ಬಹುಮಾನ ಘೋಷಿಸಿದೆ. ತಲೆಮರೆಸಿಕೊಂಡ ಆರೋಪಿಗಳಾದ ಮಹಮ್ಮದ್ ಮುಸ್ತಾಫ ಬೆಳ್ಳಾರೆ, ತುಫೈಲ್ ಮಡಿಕೇರಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ನೀಡುವುದಾಗಿ ಘೋಷಿಸಲಾಗಿದೆ.

ಅದಲ್ಲದೆ, ಇನ್ನು ಮೂವರು – ಉಮ್ಮರ್ ಫಾರೂಕ್ ಸುಳ್ಯ, ಅಬೂಬಕ್ಕರ್ ಸಿದ್ದೀಕ್ ಬೆಳ್ಳಾರೆ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್.ಐ.ಎ.ಘೋಷಿಸಿದೆ.

Leave a Comment

Your email address will not be published. Required fields are marked *