Ad Widget .

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ.

Ad Widget . Ad Widget .

ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ ಶೇಖರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದರು. ಈ ಬಗ್ಗೆ ಎಲ್ಲೆಡೆ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿತ್ತು.

Ad Widget . Ad Widget .

ತುಂಗಾ ಕಾಲುವೆಗೆ ಕಾರು ಬಿದ್ದ ಬಗ್ಗೆ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಕಾರು ಪತ್ತೆಯಾಗಿದ್ದು ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರ ಶೇಖರ್ ರವರ ಮೃತದೇಹ ಪತ್ತೆಯಾಗಿದೆ.

ಇನ್ನು ಮೃತದೇಹ ನೋಡುತ್ತಿದ್ದಂತೆ ಶಾಸಕ ರೇಣುಕಾಚಾರ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಕಾಲುವೆ ಬಳಿ ಗೋಳಾಡಿದರು.

Leave a Comment

Your email address will not be published. Required fields are marked *