ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|

ಸಮಗ್ರ ನ್ಯೂಸ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

Ad Widget ... ..

ಪ್ರಭಾವತಿ, ಗುಂಡಮ್ಮ, ಜಕ್ಕಮ್ಮ, ರಾಧಮ್ಮ, ರುಕ್ಮಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ 6 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *