Ad Widget .

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

Ad Widget . Ad Widget .

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ. ‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’ ಎಂದು ಅಪರಿಚಿತ ದುಷ್ಕರ್ಮಿಗಳು ಮುತಾಲಿಕ್ ಅವರಿಗೆ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ನಿಂದಿಸಿ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ತಮಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಮುತಾಲಿಕ್ ದೂರು ದಾಖಲಿಸಿದ್ದಾರೆ.

Ad Widget . Ad Widget .

ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಮಂಗಳೂರು ಭಾಗದ ಉರ್ದು ಮಿಶ್ರಿತ ಕನ್ನಡದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಇಂತಹ ಬೆದರಿಕೆ ಕರೆಗಳಿಗೆಲ್ಲ ನಾನು ಹೆದರುವುದಿಲ್ಲವೆಂದು ಪ್ರಮೋದ್ ಮುತಾಲಿಕ್ ಜೀವ ಬೆದರಿಕೆ ಕರೆ ಮಾಡಿದ ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನನಗೆ ಬೆದರಿಕೆ ಹಾಕುವ ಬದಲು ನೀವು ನ್ಯಾಯಯುತವಾಗಿ ಜೀವನ ಸಾಗಿಸಿ ಎಂದು ಮಾಧ್ಯಮಗಳ ಮೂಲಕ ಮುತಾಲಿಕ್ ಕರೆ ಮಾಡಿದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ನನಗೆ 4-5 ಕಾಲ್ಗಳ ಮೂಲಕ ಬೆದರಿಕೆ ಕರೆಗಳು ಬಂದಿವೆ.

ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *