Ad Widget .

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ

ಸಮಗ್ರ ನ್ಯೂಸ್: ‘ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನ. 3ರಂದು ನಡೆದಿದೆ.

Ad Widget . Ad Widget .

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.

Ad Widget . Ad Widget .

Leave a Comment

Your email address will not be published. Required fields are marked *