Ad Widget .

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು

ಸಮಗ್ರ ನ್ಯೂಸ್: ಎರಡನೇ ಬಾರಿ ಕ್ಷಮಾದಾನ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

Ad Widget . Ad Widget .

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಹೀಗಾಗಿ ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು 2013ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ಇದಾದ ಮೇಲೆ ಮತ್ತೊಮ್ಮೆ ಮುಖ್ಯ ಪೀಠದ ಮುಂದೆ ಉಮೇಶ್ ರೆಡ್ಡಿ ಅರ್ಜಿ ಸಲ್ಲಿಸಿದ್ದ. ಇದೀಗ ಕೋರ್ಟ್ ಗಲ್ಲು ಶಿಕ್ಷೆ ರದ್ದುಗೊಳಿಸಿ ತೀರ್ಪು ನೀಡಿದೆ.

Ad Widget . Ad Widget .

ಸುದೀರ್ಘ ಅವಧಿಯಲ್ಲಿ ಗಲ್ಲು ಶಿಕ್ಷೆ ಜಾರಿಯಾಗದಿರುವುದನ್ನು ಪರಿಗಣಿಸಿ ಮತ್ತು ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಏಕಾಂತ ಸೆರೆವಾಸ ಅನುಭವಿಸಿದ್ದರಿಂದ ಗಲ್ಲು ಶಿಕ್ಷೆ ಕಡಿತಗೊಳಿಸಿದೆ. ಪ್ರತಿಕ್ಷಣವೂ ಸಾವಿನ ನೆನಪಲ್ಲಿ ಬದುಕುವುದು ನ್ಯಾಯಾಲಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಜಸ್ಟಿಸ್ ಯು.ಯು. ಲಲಿತ್ ಹೇಳಿದ್ದಾರೆ.

ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಮೊದಲಿಗೆ ಸಿಆರ್ ಪಿಎಫ್ ಯೋಧನಾಗಿ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ಸೇರ್ಪಡೆಯಾಗಿದ್ದ.‌ ಅಲ್ಲಿ ಕರ್ತವ್ಯದಲ್ಲಿದ್ದಾಗಲೇ ಸೇನಾಧಿಕಾರಿಯ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿ ವಜಾಗೊಂಡಿದ್ದ. ಆನಂತರ ಕರ್ನಾಟಕದಲ್ಲಿ ಪೊಲೀಸ್ ಸೇವೆಗೆ ಸೇರಿದ್ದ. ಒಂಟಿ ಮಹಿಳೆಯರಿದ್ದ ಮನೆಗೆ ನುಗ್ಗಿ ನಡು ಮಧ್ಯಾಹ್ನವೇ ಅತ್ಯಾಚಾರ ನಡೆಸುತ್ತಿದ್ದ. ಬಳಿಕ ಪೊಲೀಸ್ ಸೇವೆಯಿಂದಲೂ ವಜಾಗೊಂಡಿದ್ದ.

ಸುಮಾರು 18 ಕೊಲೆ, 20 ಅತ್ಯಾಚಾರ ಪ್ರಕರಣಗಳನ್ನು ಎದುರಿಸಿದ್ದ ಉಮೇಶ್ ರೆಡ್ಡಿಗೆ ಒಂಬತ್ತು ಪ್ರಕರಣಗಳಲ್ಲಿ ಶಿಕ್ಷೆಯಾಗಿತ್ತು.‌‌ ತೀರಾ ವಿಕೃತವಾಗಿ ನಡೆಸಿಕೊಂಡು ವಿಧವೆ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿ ಕೊಲೆ ನಡೆಸುತ್ತಿದ್ದರಿಂದ ವಿಕೃತಕಾಮಿ ಎಂದೇ ಹೆಸರಾಗಿದ್ದ.

Leave a Comment

Your email address will not be published. Required fields are marked *