ಕುಕ್ಕೆ ಸುಬ್ರಹ್ಮಣ್ಯ: ಚಂದ್ರಗ್ರಹಣ ಹಿನ್ನೆಲೆ| ನ.8ರಂದು ದೇವಳದಲ್ಲಿ ಸೇವೆಗಳಿಗೆ ಬ್ರೇಕ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ದಿನವಾದ ನ. 8ರಂದು ಸೇವೆಗಳನ್ನು ರದ್ದುಗೊಳಿಸಿ ದೇವಸ್ಥಾನದ ಆಡಳಿತ ಪ್ರಕಟಣೆ ಹೊರಡಿಸಿದೆ.

Ad Widget ... ..

ನ.8ರಂದು ದೇವಸ್ಥಾನದಲ್ಲಿ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9ರಿಂದ 11.30ರ ತನಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಗ್ರಹಣ ಸ್ಪರ್ಶ ಸಮಯವಾದ ಮಧ್ಯಾಹ್ನ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ದರ್ಶನ ರದ್ದುಗೊಳಿಸಲಾಗಿದ್ದು, ಆ ನಂತರ ರಾತ್ರಿ 7.30ರಿಂದ 9ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *