Ad Widget .

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್

ಸಮಗ್ರ ನ್ಯೂಸ್: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ ಬಲಗಾಲಿಗೆ ಗುಂಡು ಹಾರಿಸಲಾಗಿದ್ದು ಆರೋಪಿ ಗಾಯಗೊಂಡಿದ್ದಾನೆ.

Ad Widget . Ad Widget .

ಅ. 30 ರಂದು ರಾತ್ರಿ ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿ ಅಶೋಕ ಪ್ರಭು ಎಂಬುವರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಅಶೋಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget . Ad Widget .

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಸ್ಲಾಂನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈತನ ಮೇಲೆ ವಿವಿಧ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿದ್ದವು.

ಪುರಲೆ ಹೊಸ ಬಡಾವಣೆಯಲ್ಲಿ ಅಸ್ಲಾಂ ಅವಿತುಕೊಂಡಿರುವ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದಾಗ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ರಮೇಶ್ ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ದೊಡ್ಡಪೇಟೆ ಠಾಣೆ ಪಿಎಸ್‌ಐ ವಸಂತ್ ನೇತೃತ್ವದ ತಂಡ ಅಸ್ಲಾಂ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *