ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ.
ಸಾರ್ವಜನಿಕರ ಸಹಕಾರದಿಂದ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಅರಿವಳಿಕೆ ಚುಚ್ಚುಮದ್ದು ಶೂಟ್ ಮಾಡಿ, ಬಲೆ ಹಾಕಿ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿಯಲಾದ ಚಿರತೆಯನ್ನು ಬಂಡಿಪುರ ಕಾಡಿಗೆ ಬಿಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಶ್ಮಿ ತಿಳಿಸಿದ್ದಾರೆ.