Ad Widget .

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ದುರ್ಮರಣ

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಕಳೆದ ರಾತ್ರಿ ಬಸ್ – ಬೈಕ್ ಮಧ್ಯೆ ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟ ಬೈಕ್ ಸವಾರನನ್ನು ನೆಟ್ಟಾರ್ ಬೊಳಿಯಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ.

Ad Widget . Ad Widget .

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರೋಹಿತ್ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಹೋರಾಟದಲ್ಲಿದ್ದ ರೋಹಿತ್ ತಡರಾತ್ರಿಯೇ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *